ಬಾಳೆಹೊನ್ನೂರು: ಎಸ್‌ಜೆಆರ್ ಪಿಯು ಕಾಲೇಜಿನಲ್ಲಿ ಶುಕ್ರವಾರ ನಡೆದ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ 237 ವಿದ್ಯಾರ್ಥಿಗಳು ಹಾಜರಾಗಿದ್ದರು. ಮೊದಲ ದಿನ ಎಸ್‌ಜೆಆರ್ ಪಿಯು ಕಾಲೇಜು ಕೇಂದ್ರದಲ್ಲಿ 8 ವಿದ್ಯಾರ್ಥಿಗಳು ಗೈರಾಗಿದ್ದರು. ಪ್ರಥಮ ಭಾಷೆ ಕನ್ನಡ ಪರೀಕ್ಷೆ ನಡೆದಿದ್ದು, 20 ಸಿಬ್ಬಂದಿ ಪರೀಕ್ಷಾ ಕಾರ್ಯದಲ್ಲಿ ಭಾಗವಹಿಸಿದ್ದರು.
ಸರ್ಕಾರಿ ಸ್ವತಂತ್ರ ಪಿಯು ಕಾಲೇಜು, ಬಿಜಿಎಸ್ ಪಿಯು ಕಾಲೇಜು ಹಾಗೂ ಎಸ್‌ಜೆಆರ್ ಪಿಯು ಕಾಲೇಜಿನ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. ಪರೀಕ್ಷಾ ಕೇಂದ್ರದ ಸುತ್ತ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿತ್ತು. ಪರೀಕ್ಷಾ ಕೇಂದ್ರದ ಮುಖ್ಯ ಅಧೀಕ್ಷಕರಾಗಿ ಕೆ.ಆರ್.ಬೂದೇಶ್ ಕಾರ್ಯನಿರ್ವಹಿಸಿದರು.