ಜಿಲ್ಲೆ

23ರಂದು ಕಿತ್ತೂರರಾಣಿ ಚನ್ನಮ್ಮ ಜಯಂತಿ

ಕಲಬುರಗಿ: ಡಾ.ಎಸ್.ಎಂ.ಪಂಡಿತ ರಂಗಮಂದಿರದಲ್ಲಿ ಅ.೨೩ರಂದು ಬೆಳಗ್ಗೆ ೧೧ಕ್ಕೆ ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಕಿತ್ತೂರರಾಣಿ ಚನ್ನಮ್ಮ ಜಯಂತಿ ಆಯೋಜಿಸಲಾಗಿದೆ ಎಂದು ಅಪರ ಜಿಲ್ಲಾಧಿಕಾರಿ ರಾಯಪ್ಪ ಹುಣಸಗಿ ಹೇಳಿದರು.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ಹಮ್ಮಿಕೊಂಡಿದ್ದ ಕಿತ್ತೂರು ರಾಣಿ ಚನ್ನಮ್ಮ ಜಯಂತಿ ಪೂರ್ವಭಾವಿ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿ, ಜಿಲ್ಲಾ ಮತ್ತು ತಾಲೂಕು ಸರ್ಕಾರಿ, ಅರೆ ಸರ್ಕಾರಿ ಕಚೇರಿ ಹಾಗೂ ಸರ್ಕಾರಿ ಶಾಲಾ ಕಾಲೇಜು, ಅನುದಾನಿತ ಶಾಲಾ ಕಾಲೇಜುಗಳಲ್ಲಿ ಬೆಳಗ್ಗೆ ೯ಕ್ಕೆ ಕಡ್ಡಾಯವಾಗಿ ಜಯಂತಿ ಆಚರಿಸಬೇಕು. ಭಾವಚಿತ್ರಕ್ಕೆ ಅಲಂಕಾರ ಮಾಡಬೇಕು. ಕುಡಿವ ನೀರಿನ ವ್ಯವಸ್ಥೆ ಮತ್ತು ಸ್ವಚ್ಛತೆ ಮಾಡಬೇಕು. ಜಯಂತ್ಯುತ್ಸವ ಸಮಿತಿ ಅಧ್ಯಕ್ಷರನ್ನಾಗಿ ಜ್ಯೋತಿ ಮರಗೋಳ ಅವರನ್ನು ಆಯ್ಕೆ ಮಾಡಲಾಗಿದ್ದು, ಡಾ.ಮೀನಾಕ್ಷಿ ಬಾಳಿ ವಿಶೇಷ ಉಪನ್ಯಾಸ ನೀಡುವರು ಎಂದರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ದತ್ತಪ್ಪ ಸಾಗನೂರ ಮಾತನಾಡಿ, ನಾಡಗೀತೆ ಸಂಗೀತ ಕಾರ್ಯಕ್ರಮ ಹಾಗೂ ಆಮಂತ್ರಣ ಪತ್ರಿಕೆ ಮುದ್ರಿಸಲಾಗುವುದು. ಬೆಳಗ್ಗೆ ೯ಕ್ಕೆ ಸರ್ದಾರ್ ವಲ್ಲಭಭಾಯಿ ಪಟೇಲ್ ವೃತ್ತಿದಿಂದ ಡಾ.ಪಂಡಿತ್ ರಂಗಮAದಿರÀವರೆಗೆ ಕಿತ್ತೂರು ರಾಣಿ ಚನ್ನಮ್ಮ ಅವರ ಭವ್ಯ ಮೆರವಣಿಗೆ ನಡಿಯಲಿದೆ ಎಂದು ಹೇಳಿದರು.
ಪದವಿಪೂರ್ವ ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಶಿವಶರಣಪ್ಪ ಮುಳೆಗಾಂವ್, ಜಿಲ್ಲಾ ವೀರಶೈವ ಲಿಂಗಾಯತ ಸಮಾಜ ಕಾರ್ಯದರ್ಶಿ ಡಾ.ಶ್ರೀಶೈಲ ಘೂಳಿ, ರಾಷ್ಟಿçÃಯ ಬಸವದಳದ ಆರ್.ಜಿ.ಶೆಟಗಾರ್, ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಕಾರ್ಯಕಾರಣಿ ಸದಸ್ಯೆ ಶ್ರೀದೇವಿ ಎಸ್, ವಿಜಯಲಕ್ಷಿö್ಮà ಪಾಟೀಲ್ ಇತರರಿದ್ದರು.