ಜಿಲ್ಲೆ

23ರಂದು ಕಿತ್ತೂರು ರಾಣಿ ಚೆನ್ನಮ್ಮ ಜಯಂತಿ

ಚಿತ್ರದುರ್ಗ:ಜಿಲ್ಲಾಡಳಿತ,ಜಿಪಂ,ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ನಗರಸಭೆಯಿಂದ ಡಿಸಿ ಕಚೇರಿಯಲ್ಲಿ ಅ.23ರಂದು ಬೆಳಗ್ಗೆ 11ಕ್ಕೆ ಕಿತ್ತೂ ರು ರಾಣಿ ಚೆನ್ನಮ್ಮ ಜಯಂತಿಯನ್ನು ಆಚರಿಸಲಾಗುತ್ತಿದೆ. ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಕಾರ‌್ಯಕ್ರಮ ಉದ್ಘಾಟಿಸುವರು.ಶಾಸಕ ಕೆ.ಸಿ. ವೀರೇಂದ್ರಪಪ್ಪಿ ಅಧ್ಯಕ್ಷತೆ ವಹಿಸುವರು.
ಸಂಸದ ಗೋವಿಂದ ಎಂ ಕಾರಜೋಳ, ಶಾಸಕರು,ವಿಧಾನ ಪರಿಷತ್ ಸದಸ್ಯರು,ನಿಗಮ,ಮಂಡಳಿ,ಪ್ರಾಧಿಕಾರ,ಆಯೋಗ,ನಗರಸಭೆ ಅಧ್ಯಕ್ಷರು ಮುಖ್ಯ ಅತಿಥಿಗಳಾಗಿ ಆಗಮಿಸುವರು. ವೀರಶೈವ ಸಮಾಜದ ಅಧ್ಯಕ್ಷ ಎಚ್.ಎನ್.ತಿಪ್ಪೇಸ್ವಾಮಿ, ಕಾರ್ಯದರ್ಶಿ ಪಿ.ವೀರೇಂದ್ರ ಕುಮಾರ್, ಲಿಂಗಾಯತ ಪಂಚಮಸಾಲಿ ಸಮಾಜದ ಅಧ್ಯಕ್ಷ ಕೆ.ಸಿ.ಗಂಗಾಧರಪ್ಪ,ಕಾರ‌್ಯದರ್ಶಿ ಎಸ್.ತಿಪ್ಪೇಸ್ವಾಮಿ ವೀರಶೈವ ಸಮಾಜ ಮತ್ತು ಕಿತ್ತೂರು ರಾಣಿ ಚೆನ್ನಮ್ಮ ಸಮಾಜದ ಮುಖಂಡರು,ಗಣ್ಯರು ಭಾಗವ ಹಿಸುವರು. ಭರಮಸಾಗರದ ಬಾಪೂಜಿ ಪದವಿ ಪೂರ್ವ ಕಾಲೇಜು ಪ್ರಾಚಾರ‌್ಯೆ ಡಾ.ಎನ್. ಮಮತಾ ಉಪನ್ಯಾಸ ನೀಡುವರು. ರಂಗನಿರ್ದೇಶಕ ಕೆಪಿಎಂ ಗಣೇಶಯ್ಯ ಮತ್ತವರ ತಂಡದ ಕಲಾವಿದರು ಗೀತಗಾಯನ ನಡೆಸಿಕೊಡುವರೆಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ರವಿಚಂದ್ರ ತಿಳಿಸಿದ್ದಾರೆ.