ಯಾದಗಿರಿ: ಮಾಜಿ ಮುಖ್ಯಮಂತ್ರಿ ಡಿ.ದೇವರಾಜು ಅರಸು ಜನ್ಮದಿನದ ನಿಮಿತ್ತ ರಾಜ್ಯದ 224 ವಿಧಾನಸಭಾ ಕ್ಷೇತ್ರಗಳ ವಿವಿಧ ರಂಗಗಳಲ್ಲಿ ಸಾಧನೆಗೈದ ಗಣ್ಯರನ್ನು ರಾಜ್ಯದ ಐದು ವಿಭಾಗ ಮಟ್ಟದಲ್ಲಿ ಸನ್ಮಾನಿಸಲಾಗುತ್ತಿದೆ ಎಂದು ಡಿ.ಅರಸು ಸಾಮಾಜಿಕ, ಧಾಮರ್ಿಕ ಹಾಗೂ ಸಾಂಸ್ಕೃತಿಕ ಸಂಘದ ಅಧ್ಯಕ್ಷ ಸೈದಪ್ಪ ಗುತ್ತೇದಾರ ತಿಳಿಸಿದರು.
ಸೆ.23ರಂದು ಬೆಳಗ್ಗೆ 10.30ಕ್ಕೆ ರಾಯಚೂರಿನ ವೀರಶೈವ ಕಲ್ಯಾಣ ಮಂಟಪದಲ್ಲಿ ಆಯೋಜನೆ ಮಾಡಿರುವ ಜಯಂತ್ಯುತ್ಸವಕ್ಕೆ ಕೆಕೆಆರ್ಡಿಬಿ ಅಧ್ಯಕ್ಷ ಡಾ.ಅಜಯ್ಸಿಂಗ್, ಶಾಸಕ ಗಾಲಿ ಜನಾರ್ಧನರಡ್ಡಿ ಚಾಲನೆ ನೀಡಲಿದ್ದಾರೆ. ಸಚಿವರಾದ ಪ್ರಿಯಾಂಕ್ ಖಗರ್ೆ, ಎನ್ಎಸ್ ಭೋಸರಾಜು, ಶರಣಬಸಪ್ಪ , ಡಾ.ಶರಣಪ್ರಕಾಶ ಪಾಟೀಲ್, ಶಿವರಾಜ ತಂಗಡಗಿ ಸೇರಿ ಇನ್ನಿತರರು ಆಗಮಿಸಲಿದ್ದಾರೆ ಎಂದು ಶನಿವಾರ ಸುದ್ದಿಗೋಷ್ಠಿಯಲ್ಲಿ ವಿವರಿಸಿದರು.
ಸರಕಾರ, ಈ ಹಿಂದೆ ನಡೆಸಿದ್ದ ಸಾಮಾಜಿಕ, ಆಥರ್ಿಕ ಸಮೀಕ್ಷೆ ವರದಿಯನ್ನು ಬಿಡುಗಡೆಗೊಳಿಸಬೇಕು. ಹಿಂದುಳಿದ ವರ್ಗಗಳ 197 ಜಾತಿಗಳಿಗೆ ಪ್ರತ್ಯೇಕ ಅಭಿವೃದ್ಧಿ ನಿಗಮ ಸ್ಥಾಪಿಸಬೇಕು. ರಾಜ್ಯದ ಎಲ್ಲ ವಿಧಾನಸಭಾ ಕ್ಷೇತ್ರಗಳಲ್ಲಿ ಡಿ.ಅರಸು ಸಮುದಾಯ ಭವನ ನಿಮರ್ಾಣ ಸೇರಿ ಇನ್ನಿತರ ಬೇಡಿಕೆಗಳನ್ನು ಕಾರ್ಯಕ್ರಮದಲ್ಲಿ ಮಂಡಿಸಲಾಗುವುದು ಎಂದು ಹೇಳಿದರು.