ಜಿಲ್ಲೆ

23ರಿಂದ ಕೋಟಿ ಶಿವಪಂಚಾಕ್ಷರಿ ಮಹಾಮಂತ್ರ ಮೌನ ಅನುಷ್ಠಾನ

ಶಿಕಾರಿಪುರ: ತಾಲೂಕಿನ ಕಡೇನಂದಿಹಳ್ಳಿ ಶ್ರೀಗುರು ರೇವಣಸಿದ್ಧೇಶ್ವರ ಪುಣ್ಯಾಶ್ರಮದಲ್ಲಿ ಲೋಕಕಲ್ಯಾಣಾರ್ಥ ಜು.23ರಿಂದ 108 ದಿನಗಳ ಕಾಲ ಸುಕ್ಷೇತ್ರ ದುಗ್ಲಿ ತಪೋಕ್ಷೇತ್ರ ಕಡೇನಂದಿಹಳ್ಳಿಯ ಶ್ರೀ ರೇವಣಸಿದ್ಧೇಶ್ವರ ಶಿವಾಚಾರ್ಯ ಸ್ವಾಮೀಜಿ ನೇತೃತ್ವದಲ್ಲಿ ಒಂದು ಕೋಟಿ ಶಿವಪಂಚಾಕ್ಷರಿ ಮಹಾಮಂತ್ರದ ಮೌನ ಅನುಷ್ಠಾನ ಹಮ್ಮಿಕೊಳ್ಳಲಾಗಿದೆ.

108 ದಿನಗಳ ಕಾಲ ಪ್ರತಿದಿನ ಬೆಳಗ್ಗೆ ರುದ್ರಾಭಿಷೇಕ ಅಷ್ಟೋತ್ತರ ಮಂಗಳಾರತಿ, ಶ್ರೀ ದುರ್ಗಾ ಸಪ್ತಶತಿ ಪಾರಾಯಣ ಪೂಜೆ, ಪ್ರತಿ ಗುರುವಾರ ಶ್ರೀ ಬೃಹಸ್ಪತಿ ಹೋಮ ನಡೆಯಲಿದೆ. ಹಾರನಹಳ್ಳಿ ಮಹಾಸಂಸ್ಥಾನ ಕೋಡಿಮಠದ ಜಗದ್ಗುರು ಡಾ. ಶ್ರೀ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಸಾನ್ನಿಧ್ಯದಲ್ಲಿ ಧರ್ಮಸಭೆ ನಡೆಯಲಿದ್ದು ಉಚ್ಚಂಗಿದುರ್ಗ ಕಟ್ಟಿಮನಿ ರಾಜಗುರು ಪುರವರ್ಗ ಹಿರೇಮಠ ರಾಮಘಟ್ಟದ ಶ್ರೀ ರೇವಣಸಿದ್ಧ ಶಿವಾಚಾರ್ಯ ಸ್ವಾಮೀಜಿ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಶ್ರೀ ಗುರು ರೇವಣಸಿದ್ಧೇಶ್ವರ ಜನಕಲ್ಯಾಣ ಟ್ರಸ್ಟ್ ಸಲಹಾ ಮತ್ತು ಸೇವಾ ಸಮಿತಿ ತಿಳಿಸಿದೆ.

ಕಡೇನಂದಿಹಳ್ಳಿ ಹೋಳಿನ ಹಂಪೇಶ್ವರ ಮಠದ ಶ್ರೀ ವೀರಭದ್ರ ಶಿವಾಚಾರ್ಯ ಸ್ವಾಮೀಜಿ, ಹಾರನಹಳ್ಳಿ ರಾಮಲಿಂಗೇಶ್ವರ ಮಠದ ಶ್ರೀ ಶಿವಯೋಗಿ ಶಿವಾಚಾರ್ಯ ಸ್ವಾಮೀಜಿ, ಚನ್ನಗಿರಿ ಹಿರೇಮಠದ ಶ್ರೀ ಕೇದಾರ ಶಿವಶಾಂತವೀರ ಶಿವಾಚಾರ್ಯ ಸ್ವಾಮೀಜಿ ಪಾಲ್ಗೊಳ್ಳಲಿದ್ದಾರೆ.

ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ ಶಿವಾನುಷ್ಠಾನಕ್ಕೆ ಚಾಲನೆ ನೀಡಲಿದ್ದಾರೆ. ಮಲೆನಾಡು ಪ್ರಾಧಿಕಾರದ ಅಧ್ಯಕ್ಷ ಕೆ.ಎಸ್.ಗುರುಮೂರ್ತಿ, ಮುಂಡಗೋಡ ಮಾಜಿ ಶಾಸಕ ವಿ.ಎಸ್.ಪಾಟೀಲ್, ಬಿಜೆಪಿ ಜಿಲ್ಲಾಧ್ಯಕ್ಷ ಟಿ.ಡಿ.ಮೇಘರಾಜ ಭಾಗವಹಿಸಲಿದ್ದಾರೆ. ಭದ್ರಾವತಿಯ ಡಾ. ಕೆ.ಮಹದೇವಪ್ಪ ಅವರು ಕಡೇನಂದಿಹಳ್ಳಿ ಶ್ರೀಗೆ ಬೆಳ್ಳಿ ಕಿರೀಟ ಮತ್ತು ಬೆಳ್ಳಿ ಕಮಂಡಲ ಸಮರ್ಪಣೆ ಮಾಡುವರು.