ಹುಬ್ಬಳ್ಳಿ: ಅಕ್ರಮವಾಗಿ ಮದ್ಯ ಮಾರಾಟ ಆರೋಪದ ಹಿನ್ನೆಲೆಯಲ್ಲಿ ಇಲ್ಲಿನ ಬ್ಯಾಂಕರ್ಸ್ ಕಾಲನಿಯ ತೇಜ ಬಾರ್ ಮೇಲೆ ಅಬಕಾರಿ ಇಲಾಖೆ ಅಧಿಕಾರಿಗಳು ಶುಕ್ರವಾರ ದಾಳಿ ನಡೆಸಿ, ಬರೊಬ್ಬರಿ 24 ಲಕ್ಷ ರೂ. ಮೌಲ್ಯದ ಮದ್ಯ ವಶಪಡಿಸಿಕೊಂಡಿದ್ದಾರೆ.
ಲಾಕ್ಡೌನ್ ನಡುವೆಯೂ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದರು. ದುಪ್ಪಟ್ಟು ಬೆಲೆಗೆ ಮಾರಾಟ ದಂಧೆ ನಡೆಸಿದ್ದರು ಎಂಬ ಆರೋಪ ಕೇಳಿ ಬಂದಿತ್ತು. ಆ ಹಿನ್ನೆಲೆಯಲ್ಲಿ ದಾಳಿ ನಡೆಸಲಾಗಿದೆ. ಬಾರ್ ವಿರುದ್ಧ ಪ್ರಕರಣ ದಾಖಲಿಸಿಕೊಂಡು ಬಾರ್ನಲ್ಲಿದ್ದ 24 ಲಕ್ಷ ರೂ. ಮೌಲ್ಯದ ಎಲ್ಲ ಮದ್ಯವನ್ನೂ ವಶಪಡಿಸಿಕೊಂಡಿದ್ದೇವೆ ಎಂದು ಅಬಕಾರಿ ಅಧಿಕಾರಿಗಳು ತಿಳಿಸಿದ್ದಾರೆ.