ಹುಬ್ಬಳ್ಳಿ : ಇಲ್ಲಿನ ಉಣಕಲ್ನ ಶ್ರೀ ಚಂದ್ರಮೌಳೇಶ್ವರ ದೇವಸ್ಥಾನದ ಅಭಿವೃದ್ಧಿಗೆ ಶಾಸಕ ಮಹೇಶ ಟೆಂಗಿನಕಾಯಿ ಮುಂದಾಗಿದ್ದಾರೆ.
ಕಾಶಿಯ ವಿಶ್ವನಾಥ ಕಾರಿಡಾರ್ ಮಾದರಿಯಲ್ಲಿ ಶ್ರೀ ಚಂದ್ರಮೌಳೇಶ್ವರ ಕಾರಿಡಾರ್ ನಿರ್ವಿುಸಲು ಯೋಜನೆ ನಿರ್ವಿುಸಲಾಗಿದೆ. ಈಗಾಗಲೇ ಶಾಸಕ ಮಹೇಶ ಟೆಂಗಿನಕಾಯಿ ನೇತೃತ್ವದಲ್ಲಿ ಜಿಲ್ಲಾಡಳಿತ ಹಾಗೂ ಮಹಾನಗರ ಪಾಲಿಕೆ ವತಿಯಿಂದ 25 ಕೋಟಿ ರೂ. ಮೌಲ್ಯದ ಡಿಪಿಆರ್ ಸಿದ್ಧಪಡಿಸಿ, ನಗರಾಭಿವೃದ್ಧಿ ಇಲಾಖೆಗೆ ಕಳುಹಿಸಲಾಗಿದೆ.
ಶ್ರೀ ಚಂದ್ರಮೌಳೇಶ್ವರ ದೇವಸ್ಥಾನ ಎದುರಿನ ರಸ್ತೆ ಇಕ್ಕಟ್ಟಾಗಿದೆ. ಹೀಗಾಗಿ, ದೇವಸ್ಥಾನದ ಮುಂಭಾಗ ಹಾಗೂ ಹಿಂಭಾಗದ ಜಾಗವನ್ನು ವಶಪಡಿಸಿಕೊಳ್ಳಲು 18 ಕೋಟಿ ರೂ.ಗಳನ್ನು ಮೀಸಲಿಡಲು ಡಿಪಿಆರ್ನಲ್ಲಿ ಸಲಹೆ ನೀಡಲಾಗಿದ್ದು, ಇನ್ನುಳಿದ 7 ಕೋಟಿ ರೂ. ವೆಚ್ಚದಲ್ಲಿ ದೇವಸ್ಥಾನ ಅಭಿವೃದ್ಧಿಪಡಿಸಲು ಚಿಂತಿಸಲಾಗಿದೆ. ದೇವಸ್ಥಾನದ ಸುತ್ತಲಿನ 68 ಆಸ್ತಿಗಳನ್ನು ವಶಪಡಿಸಿಕೊಳ್ಳಲು ಗುರುತಿಸಲಾಗಿದೆ.
ದೇವಸ್ಥಾನದ ಮುಖ್ಯ ದ್ವಾರವನ್ನು ಮುಖ್ಯ ರಸ್ತೆಗೆ ಜೋಡಣೆ ಮಾಡಿ, ರಸ್ತೆ ಮಧ್ಯೆ ವಿಭಜಕ ಹಾಕಲು ಹಾಗೂ ಅಲಂಕೃತ ವಿದ್ಯುತ್ ದೀಪಗಳನ್ನು ಅಳವಡಿಸಲು ಯೋಜಿಸಲಾಗಿದೆ.
ಜಿಲ್ಲಾಡಳಿತ, ಮಹಾನಗರ ಪಾಲಿಕೆ, ಕಂದಾಯ, ಪ್ರವಾಸೋದ್ಯಮ ಹಾಗೂ ಇನ್ನಿತರ ಇಲಾಖೆಗಳನ್ನು ಸೇರಿಸಿ, ಸಮನ್ವಯದೊಂದಿಗೆ ಕಾರ್ಯನಿರ್ವಹಿಸಲಾಗುತ್ತಿದೆ. ಈ ಕುರಿತು ಶಾಸಕ ಮಹೇಶ ಟೆಂಗಿನಕಾಯಿ ಅವರು ಈಗಾಗಲೇ ಕೇಂದ್ರ ಸಚಿವ ಪ್ರಲ್ಹಾದ ಜೋಶಿ, ರಾಜ್ಯದ ನಗರಾಭಿವೃದ್ಧಿ ಸಚಿವ ಸುರೇಶ ಬಿ.ಎಸ್., ಪ್ರವಾಸೋದ್ಯಮ ಇಲಾಖೆ ಸಚಿವ ಎಚ್.ಕೆ. ಪಾಟೀಲ, ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಅವರೊಂದಿಗೆ ಶ್ರೀ ಚಂದ್ರಮೌಳೇಶ್ವರ ದೇವಸ್ಥಾನದ ಅಭಿವೃದ್ಧಿ ಕುರಿತು ರ್ಚಚಿಸಿದ್ದಾರೆ.
ನಗರಾಭಿವೃದ್ಧಿ ಇಲಾಖೆ ಈ ಯೋಜನೆಗೆ ಅನುಮೋದನೆ ನೀಡಿದ ನಂತರ ಮತ್ತೊಮ್ಮೆ ವಿಸõತ ಯೋಜನಾ ವರದಿ ಸಿದ್ಧಪಡಿಸಲಾಗುವುದು ಎಂದು ಶಾಸಕ ಮಹೇಶ ಟೆಂಗಿನಕಾಯಿ ‘ವಿಜಯವಾಣಿ’ಗೆ ತಿಳಿಸಿದ್ದಾರೆ.