ವಿಜಯವಾಣಿ ಸುದ್ದಿಜಾಲ ಪುತ್ತೂರು ಗ್ರಾಮಾಂತರ
ಸಿಬ್ಬಂದಿಯ ಪ್ರಾಮಾಣಿಕ ಮತ್ತು ಪಾರದರ್ಶಕ ಸೇವೆ, ಗ್ರಾಹಕರ ಸಹಕಾರದಿಂದಾಗಿ ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘ ಹೆಮ್ಮರವಾಗಿ ಬೆಳೆದು 23 ಶಾಖೆಗಳನ್ನು ತೆರೆಯಲು ಸಾಧ್ಯವಾಗಿದೆ. ಮುಂದಿನ ಎರಡು ತಿಂಗಳೊಳಗೆ 25 ಶಾಖೆಗಳನ್ನು ಪೂರ್ಣಗೊಳಿಸುವ ವ್ಯವಸ್ಥೆ ಮಾಡಿಕೊಳ್ಳಲಾಗಿದೆ ಎಂದು ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘದ ಅಧ್ಯಕ್ಷ ಎನ್.ಪದ್ಮನಾಭ ಮಾಣಿಂಜ ಹೇಳಿದರು.
ಭಾನುವಾರ ಪುತ್ತೂರು ತಾಲೂಕಿನ ಕುಂಬ್ರದ ಅಕ್ಷಯ ಆರ್ಕೆಡ್‌ನ ನೆಲಮಹಡಿಯಲ್ಲಿ ಆರಂಭಿಸಲಾದ ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘದ 23ನೇ ಶಾಖೆಯ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ವಿಧಾನಪರಿಷತ್ ಸದಸ್ಯ ಕಿಶೋರ್‌ಕುಮಾರ್ ಬೊಟ್ಯಾಡಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು.
ನೂತನ ಶಾಖೆಯನ್ನು ಉದ್ಘಾಟಿಸಿ ಮಾತನಾಡಿದ ಪುತ್ತೂರು ಬ್ರಹ್ಮಶ್ರೀ ನಾರಾಯಣಗುರು ಬಿಲ್ಲವ ಸಂಘದ ಅಧ್ಯಕ್ಷ ಸತೀಶ್‌ಕುಮಾರ್ ಕೆಡೆಂಜಿ, 1 ಸಾವಿರ ಕೋಟಿಗೂ ಹೆಚ್ಚಿನ ವ್ಯವಹಾರ ಮಾಡುತ್ತಿರುವ ಸಾಧನೆ ಶ್ರೀ ಗುರುದೇವ ಸಹಕಾರ ಸಂಘದ್ದಾಗಿದೆ. ಗ್ರಾಹಕರಿಗೆ ಉತ್ತಮ ಸೇವೆ ನೀಡಿದರೆ ಸಹಕಾರ ಸಂಸ್ಥೆಗಳು ಬೆಳೆಯುತ್ತವೆ ಎಂದರು.
ಭದ್ರತಾ ಕೋಶವನ್ನು ಪುತ್ತೂರು ಅಕ್ಷಯ ಕಾಲೇಜಿನ ಅಧ್ಯಕ್ಷ ಜಯಂತ ನಡುಬೈಲು, ಗಣಕ ಯಂತ್ರವನ್ನು ಒಳಮೊಗ್ರು ಗ್ರಾಪಂ ಅಧ್ಯಕ್ಷೆ ತ್ರಿವೇಣಿ ಪಲ್ಲತ್ತಾರು, ಸಭಾ ಕಾರ್ಯಕ್ರಮವನ್ನು ಪ್ರಗತಿಪರ ಕೃಷಿಕ ವಾಸು ಪೂಜಾರಿ ಗುಂಡ್ಯಡ್ಕ ಉದ್ಘಾಟಿಸಿದರು. ನಿರಖು ಠೇವಣಿ ಸರ್ಟಿಫಿಕೇಟನ್ನು ಕೆದಂಬಾಡಿ ಗ್ರಾಪಂ ಅಧ್ಯಕ್ಷೆ ಸುಜಾತ ಮುಳಿಗದ್ದೆ, ಉಳಿತಾಯ ಖಾತೆ ಪುಸ್ತಕವನ್ನು ಕುಂಬ್ರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಪ್ರಕಾಶ್‌ಚಂದ್ರ ರೈ ಕೈಕಾರ ಸಾಂಕೇತಿಕವಾಗಿ ವಿತರಿಸಿದರು. ಉದ್ಯಮಿ ಪುರಂದರ ರೈ ಮಿತ್ರಂಪಾಡಿ ಅತಿಥಿಯಾಗಿ ಭಾಗವಹಿಸಿದರು.
ಕುಂಬ್ರ ಮೂರ್ತೆದಾರರ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಆರ್.ಸಿ.ನಾರಾಯಣ, ಕುಂಬ್ರ ವರ್ತಕ ಸಂಘದ ಅಧ್ಯಕ್ಷ ರಫೀಕ್ ಅಲ್‌ರಾಯ, ಪರ್ಪುಂಜ ರಾಮಜಾಲು ಗರಡಿಯ ಆಡಳಿತ ಮೊಕ್ತೇಸರ ಸಂಜೀವ ಪೂಜಾರಿ ಕೂರೇಲು, ಕೆಯ್ಯೂರು ವರ್ತಕ ಸಂಘದ ಅಧ್ಯಕ್ಷರಾದ ನಿವೃತ್ತ ತಹಶೀಲ್ದಾರ್ ವಿಶ್ವನಾಥ ಪೂಜಾರಿ ಕೆಂಗುಡೇಲು, ಕುಂಬ್ರ ಶ್ರೀ ರಾಮ ಭಜನಾ ಮಂದಿರದ ಅಧ್ಯಕ್ಷ ಮೋನಪ್ಪ ಪೂಜಾರಿ ಅತಿಥಿಗಳಾಗಿದ್ದರು.
ಸಂಘದ ಶಾಖೆ ಆರಂಭಿಸುವಲ್ಲಿ ಸಹಕಾರ ನೀಡಿದ ಜಯಂತ ನಡುಬೈಲು, ವಕೀಲ ಸುಂದರ ಪೂಜಾರಿ ಮಣಿಕ್ಕರ, ಉದ್ಯಮಿ ಭಾಸ್ಕರ ಪೂಜಾರಿ ಪಾಂಬಾರು ಅವರನ್ನು ಸನ್ಮಾನಿಸಲಾಯಿತು. ಸಂಘದ ಉಪಾಧ್ಯಕ್ಷ ಭಗೀರಥ ಜಿ, ನಿರ್ದೇಶಕರಾದ ಸಂಜೀವ ಪೂಜಾರಿ, ತನುಜಾ ಶೇಖರ್, ಧರ್ಣಪ್ಪ ಪೂಜಾರಿ, ಚಿದಾನಂದ ಪೂಜಾರಿ ಎಲ್ದಕ್ಕ, ಶಾಖಾ ವ್ಯವಸ್ಥಾಪಕ ಅಶ್ವಥ್ ವಿ, ಕೇಂದ್ರ ಕಚೇರಿ ವ್ಯವಸ್ಥಾಪಕ ಕೀರ್ತನ್ ಉಪಸ್ಥಿತರಿದ್ದರು. ವಿವಿಧ ಶಾಖೆಗಳ ಶಾಖಾ ವ್ಯವಸ್ಥಾಪಕರು ಮತ್ತು ಸಿಬ್ಬಂದಿ ಪಾಲ್ಗೊಂಡಿದ್ದರು.
ಸ್ಮತಿ ಪಲ್ಲತ್ತಾರು ಪ್ರಾರ್ಥಿಸಿದರು. ಸಂಘದ ನಿರ್ದೇಶಕ ಡಾ.ರಾಜಾರಾಮ್ ಕೆ.ಬಿ ಸ್ವಾಗತಿಸಿದರು. ಸಂಘದ ವಿಶೇಷಾಧಿಕಾರಿ ಎಂ.ಮೋನಪ್ಪ ಪೂಜಾರಿ ಕಂಡೆತ್ಯಾರು ಪ್ರಾಸ್ತಾವಿಕವಾಗಿ ಮಾತನಾಡಿದರು. ಮುಖ್ಯಕಾರ್ಯನಿರ್ವಹಣಾಧಿಕಾರಿ ಅಶ್ವತ್ಥ್‌ಕುಮಾರ್ ಕಾರ್ಯಕ್ರಮ ನಿರೂಪಿಸಿದರು.
ಸಂಘದಲ್ಲಿ ಪ್ರಸ್ತುತ 42 ಸಾವಿರಕ್ಕೂ ಮಿಕ್ಕಿ ಸದಸ್ಯರಿದ್ದಾರೆ. 210 ಕೋಟಿ ರೂ.ಗೂ ಅಧಿಕ ಠೇವಣಾತಿ ಹೊಂದಿದ್ದು, 1250 ಕೋಟಿ ರೂ.ಗೂ ಮಿಕ್ಕಿ ವ್ಯವಹಾರ ನಡೆಸಲಾಗುತ್ತಿದೆ. ಪ್ರತಿವರ್ಷ ನಮ್ಮ ಸಂಸ್ಥೆಯ ವಿದ್ಯಾಲಯದ ವಿದ್ಯಾರ್ಥಿಗಳಿಗೆ 6 ರೂ. ಲಕ್ಷದಷ್ಟು ವಿದ್ಯಾರ್ಥಿವೇತನ, ಇಂಜಿನಿಯರಿಂಗ್ ಮತ್ತು ವೈದ್ಯಕೀಯ ಶಿಕ್ಷಣ ಪಡೆಯುತ್ತಿರುವವರಿಗೆ ನೆರವು ನೀಡಲಾಗುತ್ತಿದೆ. - ಎಂ.ಮೋನಪ್ಪ ಪೂಜಾರಿ ಕಂಡ್ಯೆತ್ಯಾರು, ಸಂಘದ ವಿಶೇಷಾಧಿಕಾರಿ ಸಂಘದ ಹೆಸರಿನಲ್ಲೇ ಒಂದು ಶಕ್ತಿ ಇದೆ. ಹಿಂದು ಸಮಾಜದ ಎಡರುತೊಡರುಗಳನ್ನು ಮೆಟ್ಟಿನಿಂತು ಹಿಂದು ಸಮಾಜಕ್ಕೆ ಶಕ್ತಿ ನೀಡಿದವರು, ಹಿಂದು ಸಮಾಜವನ್ನು ಒಗ್ಗೂಡಿಸಿ ಸದೃಢ ಮತ್ತು ಶೈಕ್ಷಣಿಕವಾಗಿ ಬಲಿಷ್ಠಗೊಳ್ಳಲು ಕಾರಣವಾದವರು ನಾರಾಯಣ ಗುರುಗಳು. ಅವರ ಹೆಸರಿನಲ್ಲಿ ಆರಂಭಗೊಂಡಿರುವ ಈ ಸಂಘ ಸಮಾಜದ ಆಶೋತ್ತರಗಳನ್ನು ಈಡೇರಿಸುವ ಮತ್ತು ಸಾಮಾನ್ಯ ವರ್ಗದ ಜನತೆಗೆ ಶಕ್ತಿ ತುಂಬುವ ಮೂಲಕ ಇನ್ನಷ್ಟು ಪ್ರಗತಿಯಾಗಲಿ. - ಕಿಶೋರ್‌ಕುಮಾರ್ ಬೊಟ್ಯಾಡಿ ವಿಧಾನಪರಿಷತ್ ಸದಸ್ಯ https://www.vijayavani.net/mamata-rai-speech https://www.vijayavani.net/foundation-stone-laying-for-madhur-kshetra-seva-kendra-building