ಚಿತ್ರದುರ್ಗ: ಎಸ್‌ಎಸ್‌ಎಲ್‌ಸಿ ಪರೀಕ್ಷೆ- 2 ಮೇ 26 ರಿಂದ ಜೂನ್ 2 ರವರೆಗೆ ನಡೆಸಲಾಗುತ್ತಿದೆ. ಪ್ರಥಮ ಬಾರಿಗೆ ಪರೀಕ್ಷೆ ನೋಂದಣಿಯಾಗುವ ವಿದ್ಯಾರ್ಥಿಗಳಿಗೆ ಶುಲ್ಕ ಪಾವತಿಯಿಂದ ವಿನಾಯಿತಿ ನೀಡಲಾಗಿದೆ. ಪರೀಕ್ಷೆಗೆ ನೋಂದಾಯಿಸಿಕೊಳ್ಳಲು ಮೇ 10 ಕೊನೆ ದಿನವಾಗಿದ್ದು, ಜಿಲ್ಲೆಯಲ್ಲಿ ಅನುತ್ತೀರ್ಣಗೊಂಡಿರುವ 13,579 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಳ್ಳಬೇಕು. ಶೇ.75 ಹಾಜರಾತಿ ಕೊರತೆಯಿಂದಾಗಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ-01 ರಿಂದ ಹೊರಗುಳಿದ 15 ವರ್ಷ ಪೂರ್ಣಗೊಳಿಸಿದವರಿಗೆ ಪರೀಕ್ಷೆ ಬರೆಯಲು ಅವಕಾಶ ನೀಡಲಾಗಿದೆ ಎಂದು ಡಿಡಿಪಿಐ ಎಂ.ಆರ್.ಮಂಜುನಾಥ್ ತಿಳಿಸಿದ್ದಾರೆ.