ಚಿತ್ರದುರ್ಗ:ಅಮೃತ ಭಾರತ ರೈಲ್ವೆ ಸ್ಟೇಷನ್ ಯೋಜನೆಯಡಿ ನಗರದ ರೈಲು ನಿಲ್ದಾಣ ನವೀಕರಣ ಹಾಗೂ ಮೇಲ್ದರ್ಜೆಗೇರಿಸುವ ಕಾ ಮಗಾರಿಗಳಿಗೆ ಫೆ.26ರಂದು ಬೆಳಗ್ಗೆ 10.45ಕ್ಕೆ ನಿಲ್ದಾಣದಲ್ಲಿ ಶಂಕುಸ್ಥಾಪನೆ ಕಾರ‌್ಯಕ್ರಮವನ್ನು ಆಯೋಜಿಸಲಾಗಿದೆ. ಮೈಸೂರು ವಿಭಾಗದ 12 ನಿಲ್ದಾಣಗಳು ಹಾಗೂ 13 ರೈಲ್ವೆ ಮೇಲ್ಸೇತುವೆ-ಕೆಳ ಸೇತುವೆ ಕಾಮಗಾರಿಗಳಿಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಅಂದು ಮಧ್ಯಾಹ್ನ 12.30ಕ್ಕೆ ವರ್ಚುವಲ್ ಮೂಲಕ ಶಂಕುಸ್ಥಾಪನೆ ನೆರವೇರಿಸುವರು. ಕೇಂದ್ರ ಸಚಿವ ಎ.ನಾರಾಯಣಸ್ವಾಮಿ ಸೇರಿದಂತೆ ವಿವಿಧ ಗಣ್ಯರು ಚಿತ್ರದುರ್ಗ ರೈಲ್ವೆ ನಿಲ್ದಾಣದಲ್ಲಿ ಉಪಸ್ಥಿತರಿರುವರು ವೆಂದು ನೈಋತ್ಯ ರೈಲ್ವೆ ಮೈಸೂರು ವಿಭಾಗದ ಸೀನಿಯರ್ ಡಿವಿಜಿನಲ್ ಕಮರ್ಷಿಯಲ್ ಮ್ಯಾನೇಜರ್ ಜೆ.ಲೋಹಿತೇಶ್ವರ ತಿಳಿಸಿದ್ದಾರೆ.