ಶಿಕಾರಿಪುರದಲ್ಲಿ ಮುಂಗಾರು ಜಾನಪದ ಸಂಭ್ರಮಾಚರಣೆ ಕಾರ್ಯಕ್ರಮದ ಆಹ್ವಾನ ಪತ್ರಿಕೆಯನ್ನು ಪಾಪಯ್ಯ ಅಭಿಮಾನಿ ಬಳಗದ ಅಧ್ಯಕ್ಷ ಎ.ಕೆ.ಹಾಲಪ್ಪ, ಸಂಚಾಲಕ ಶಿವಕುಮಾರ್, ಬಾಪೂಜಿ ವಿದ್ಯಾಸಂಸ್ಥೆ ಮುಖ್ಯಶಿಕ್ಷಕ ರಾಘವೇಂದ್ರ ಕುಲಕರ್ಣಿ, ಸುರೇಂದ್ರ ಪ್ರದರ್ಶಿಸಿದರು.  
ಜಿಲ್ಲೆ

27ರಂದು ಶಿಕಾರಿಪುರದಲ್ಲಿ ಮುಂಗಾರು ಜಾನಪದ ಸಂಭ್ರಮಾಚರಣೆ

ಶಿಕಾರಿಪುರ: ಜಾನಪದ ಪರಿಷತ್ ತಾಲೂಕು ಅಧ್ಯಕ್ಷ, ಶಿಕ್ಷಕ ಬಿ.ಪಾಪಯ್ಯ ಅವರ ಜನ್ಮದಿನದ ನಿಮಿತ್ತ ಜು.27ರಂದು ಬೆಳಗ್ಗೆ 10ಕ್ಕೆ ಶಿವಗಿರಿ ಸಮುದಾಯ ಭವನದಲ್ಲಿ ಮುಂಗಾರು ಜಾನಪದ ಸಂಭ್ರಮಾಚರಣೆ ಆಯೋಜಿಸಲಾಗಿದೆ ಎಂದು ಕನ್ನಡ ಸಾಹಿತ್ಯ-ಸಾಂಸ್ಕೃತಿಕ ವೇದಿಕೆ ಅಧ್ಯಕ್ಷ ಕೆ.ಎಸ್.ಹುಚ್ಚರಾಯಪ್ಪ ತಿಳಿಸಿದರು.

ಬಿ.ಪಾಪಯ್ಯ ಅಭಿಮಾನಿ ಬಳಗ, ಬಾಪೂಜಿ ವಿದ್ಯಾಸಂಸ್ಥೆ ಆಶ್ರಯದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿದ್ದು ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ ಚಾಲನೆ ನೀಡಲಿದ್ದಾರೆ. ಡೊಳ್ಳು ಕುಣಿತ, ವೀರಗಾಸೆ, ಗೀಗಿ ಪದ ಸೇರಿದಂತೆ ಇಪ್ಪತ್ತಕ್ಕೂ ಹೆಚ್ಚು ಜಾನಪದ ಕಲಾ ತಂಡಗಳು ಪ್ರದರ್ಶನ ನೀಡಲಿವೆ ಎಂದು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಕಸಾಪ ಜಿಲ್ಲಾಧ್ಯಕ್ಷ ಡಿ.ಮಂಜುನಾಥ್, ರಾಜ್ಯ ಜಾನಪದ ಅಕಾಡೆಮಿ ಮಾಜಿ ಅಧ್ಯಕ್ಷ ಬಿ.ಟಾಕಪ್ಪ, ಬಿಇಒ ಜಿ.ಎಸ್.ಶಶಿಧರ್, ಸರ್ಕಾರಿ ನೌಕರ ಸಂಘದ ತಾಲೂಕು ಅಧ್ಯಕ್ಷ ಮಧುಕೇಶ್ವರ್, ತಾಲೂಕು ಪ್ರೌಢಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಬಸವನ ಕೌಣ್ತಿ, ಪತ್ರಕರ್ತರ ಸಂಘದ ಅಧ್ಯಕ್ಷ ಚಂದ್ರಶೇಖರ್ ಮಠದ್, ಕಸಾಪ ತಾಲೂಕು ಅಧ್ಯಕ್ಷ ಎಚ್.ಎಸ್.ರಘು ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು ಎಂದರು.
ಪಾಪಯ್ಯ ಅಭಿಮಾನಿ ಬಳಗದ ಅಧ್ಯಕ್ಷ ಎ.ಕೆ.ಹಾಲಪ್ಪ, ಸಂಚಾಲಕ ಶಿವಕುಮಾರ್, ಬಾಪೂಜಿ ವಿದ್ಯಾಸಂಸ್ಥೆ ಮುಖ್ಯಶಿಕ್ಷಕ ರಾಘವೇಂದ್ರ ಕುಲಕರ್ಣಿ, ಸುರೇಂದ್ರ ಇತರರಿದ್ದರು.