????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????? 
ಜಿಲ್ಲೆ

29 ಅಂಶಗಳ ಕಾರ್ಯಕ್ರಮ ಸಮರ್ಪಕವಾಗಿ ಅನುಷ್ಠಾನವಾಗಲಿ

ಹನೂರು: ಈ ಬಾರಿ ಎಸ್ಸೆಸ್ಸೆಲ್ಸಿ ಫಲಿತಾಂಶವನ್ನು ಉತ್ತಮಪಡಿಸುವ ನಿಟ್ಟಿನಲ್ಲಿ ಸರ್ಕಾರ ಜಾರಿಗೊಳಿಸಿರುವ 29 ಅಂಶಗಳ ಕಾರ್ಯಕ್ರಮವನ್ನು ಪ್ರತಿಯೊಬ್ಬರೂ ಶಾಲೆಗಳಲ್ಲಿ ಸಮರ್ಪಕವಾಗಿ ಅನುಷ್ಠಾನಗೊಳಿಸಬೇಕು ಎಂದು ಪ್ರಭಾರ ಕ್ಷೇತ್ರ ಶಿಕ್ಷಣಾಧಿಕಾರಿ ಮಹೇಶ್ ತಿಳಿಸಿದರು.

ಪಟ್ಟಣದ ಬಿಆರ್‌ಸಿ ಕೇಂದ್ರದ ಸಭಾಂಗಣದಲ್ಲಿ ಸೋಮವಾರ ಎಸ್ಸೆಸ್ಸೆಲ್ಸಿ ಫಲಿತಾಂಶ ಸುಧಾರಿಸುವ ಸಂಬಂಧ ಆಯೋಜಿಸಿದ್ದ ಪ್ರೌಢಶಾಲಾ ಮುಖ್ಯ ಶಿಕ್ಷಕರ ಸಭೆಯಲ್ಲಿ ಮಾತನಾಡಿ, ಈ ಹಿಂದೆ ಎಸ್ಸೆಸ್ಸೆಲ್ಸಿ ಫಲಿತಾಂಶದಲ್ಲಿ ಹನೂರು ಶೈಕ್ಷಣಿಕ ವಲಯ ಜಿಲ್ಲೆಯಲ್ಲಿಯೇ ಪ್ರಥಮ ಸ್ಥಾನ ಗಳಿಸುತ್ತಿತ್ತು. ಆದರೆ, ಕಳೆದ 2 ವರ್ಷಗಳಿಂದ ಫಲಿತಾಂಶದಲ್ಲಿ ಇಳಿಕೆ ಕಂಡಿದೆ. ಹಾಗಾಗಿ ಫಲಿತಾಂಶವನ್ನು ಸುಧಾರಿಸುವ ಕೆಲಸವಾಗಬೇಕಿದೆ ಎಂದರು.

ಕ್ಷೇತ್ರ ಶಿಕ್ಷಣಾಧಿಕಾರಿಯಾಗಿದ್ದ ದಿ.ಗುರುಲಿಂಗಯ್ಯ ಅವರು ಮುಖ್ಯ ಶಿಕ್ಷಕರ ಸಭೆ ನಡೆಸಿ ರೂಪುರೇಷಗಳನ್ನು ಸಿದ್ಧಪಡಿಸಿದ್ದರು. ಆದ್ದರಿಂದ ಪ್ರತಿಯೊಬ್ಬರು ಅವರ ಆಶಯದಂತೆ ಕಾರ್ಯರೂಪಗೊಳಿಸಬೇಕು. ಹಾಗೆಯೇ ಯಾವುದೇ ಲೋಪವಿಲ್ಲದಂತೆ ಸರ್ಕಾರದ 29 ಅಂಶಗಳ ಕಾರ್ಯಕ್ರಮವನ್ನು ಶಾಲೆಯಲ್ಲಿ ಸಮರ್ಪಕವಾಗಿ ಅನುಷ್ಠಾನಗೊಳಿಸಬೇಕು. ಇದರಲ್ಲಿ ಯಾವುದೇ ನಿರ್ಲಕ್ಷ್ಯ ಸಲ್ಲದು. ಒಟ್ಟಿನಲ್ಲಿ ಎಸ್ಸೆಸ್ಸೆಲ್ಸಿ ಫಲಿತಾಂಶ ಈ ಬಾರಿ ಸುಧಾರಣೆಯಾಗುವುದರ ಜತೆಗೆ ಶೈಕ್ಷಣಿಕ ವಲಯ ಜಿಲ್ಲೆಯಲ್ಲೆ ಪ್ರಥಮ ಸ್ಥಾನ ಗಳಿಸಲು ಪ್ರತಿಯೊಬ್ಬರೂ ಹೆಚ್ಚಿನ ಒತ್ತು ನೀಡಬೇಕು ಎಂದು ತಿಳಿಸಿದರು.

ಇದೇ ವೇಳೆ ಸರ್ಕಾರದ ಮಾರ್ಗಸೂಚಿಯಂತೆ ಆ್ಯಪ್ ಮೂಲಕ ನಮೂದಿಸಬೇಕಿರುವ ಶಾಲೆಯ ಮಾಹಿತಿ, ವಿದ್ಯಾರ್ಥಿಗಳ ಕಲಿಕೆಯ ಪ್ರಗತಿ ಬಗ್ಗೆ ತಿಳಿಸಲಾಯಿತು. ಕೊಠಡಿ ಅಗತ್ಯತೆ, ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಭಾಗವಹಿಸುವಿಕೆಯ ಜ್ಞಾನಸೇತು ಕಾರ್ಯಕ್ರಮ ಲಾಗಿನ್ ಹಾಗೂ ಇನ್ನಿತರ ಶಾಲಾ ಶೈಕ್ಷಣಿಕ ವಿಷಯಕ್ಕೆ ಸಂಬಂಧಿಸಿದಂತೆ ಚರ್ಚಿಸಲಾಯಿತು.

ಬಿಆರ್‌ಸಿ ವೆಂಕಟೇಶ್, ಶಿಕ್ಷಣ ಸಂಯೋಜಕ ಅಶೋಕ್, ಪ್ರೌಢಶಾಲೆಗಳ ಮುಖ್ಯ ಶಿಕ್ಷಕರು ಇದ್ದರು.

-----------

ಫೋಟೋ

22 ಹನೂರು 5 ಹನೂರಿನಲ್ಲಿ ಪ್ರಭಾರ ಬಿಇಒ ಮಹೇಶ್ ಅಧ್ಯಕ್ಷತೆಯಲ್ಲಿ ಮುಖ್ಯ ಶಿಕ್ಷಕರ ಸಭೆ ನಡೆಯಿತು. ವೆಂಕಟೇಶ್, ಅಶೋಕ್ ಇತರರು ಇದ್ದರು.