ಚಿತ್ರದುರ್ಗ:ನಗರದ ಬಾಪೂಜಿ ಶಿಕ್ಷಣ ಮಹಾವಿದ್ಯಾಲಯ,ಚಿತ್ರದುರ್ಗ ಸೈನ್ಸ್ ಫೌಂಡೇಷನ್ ಹಾಗೂ ಜಿಲ್ಲಾ ಶರಣ ಸಾಹಿತ್ಯ ಪರಿಷ ತ್ ಸಂಯುಕ್ತಾಶ್ರಯದಲ್ಲಿ ಮೇ 29ರಂದು ಬೆಳಗ್ಗೆ 10.30ಕ್ಕೆ ಬಾಪೂಜಿ ಸಭಾಂಗಣದಲ್ಲಿ ಪವಾಡಗಳ ಗುಟ್ಟು ಬಯಲು ಬಗ್ಗೆ ಉಪನ್ಯಾಸ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.ಬಾಪೂಜಿ ಸಮೂಹ ಸಂಸ್ಥೆಗಳ ಕಾರ್ಯದರ್ಶಿಡಾ.ಕೆ.ಎಂ.ವೀರೇಶ್ ಅಧ್ಯಕ್ಷತೆ ವಹಿಸಲಿದ್ದಾರೆ. ಸೈನ್ಸ್ ಫೌಂಡೇಷನ್ ಅಧ್ಯಕ್ಷ ಡಾ.ಜಿ.ಎನ್.ಮಲ್ಲಿಕಾರ್ಜುನಪ್ಪ ಕಾರ‌್ಯಕ್ರಮ ಉದ್ಘಾಟಿಸುವರು. ಹಿರಿಯೂರು ಗಿರೀಶ ಶಿಕ್ಷಣ ಮಹಾವಿದ್ಯಾಲಯ ದ ಪ್ರಾಧ್ಯಾಪಕ ಎಚ್.ಮಂಜುನಾಥ್ ಉಪನ್ಯಾಸ ನೀಡುವರು.