ಮೈಸೂರು: ನಗರದ ಹೊರ ವಲಯದಲ್ಲಿ ತಲೆ ಎತ್ತಿರುವ ‘ವಿಷ್ಣು ಸ್ಮಾರಕ’ ಉದ್ಘಾಟನೆಗೆ ಕೊನೆಗೂ ಮುಹೂರ್ತ ಕೂಡಿ ಬಂದಿದೆ.
ಮೈಸೂರು ತಾಲೂಕಿನ ಉದ್ಬೂರು ಬಳಿಯ ಹಾಲಾಳು ಗ್ರಾಮದಲ್ಲಿ ನಿರ್ಮಾಣಗೊಂಡಿರುವ ನಟ ದಿ.ವಿಷ್ಣುವರ್ಧನ್ ಅವರ ಸ್ಮಾರಕವನ್ನು ಜ.29ರಂದು ಬೆಳಗ್ಗೆ 11ಕ್ಕೆ ಉದ್ಘಾಟಿಸಲು ನಿರ್ಧರಿಸಲಾಗಿದೆ.
ಈ ಕಾರ್ಯಕ್ರಮದಲ್ಲಿ ಭಾಗವಹಿಸಲು ತಾತ್ಕಾಲಿಕವಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಒಪ್ಪಿಗೆ ನೀಡಿದ್ದಾರೆ. ಸಿಎಂ ವಿಶೇಷ ಕರ್ತವ್ಯ ಅಧಿಕಾರಿ ಬಿ.ಪಿ. ಚನ್ನಬಸವೇಶ ಅವರು ವಾರ್ತಾ ಇಲಾಖೆಯ ಆಯುಕ್ತರಿಗೆ ಪತ್ರ ಬರೆದು ಈ ವಿಷಯವನ್ನು ತಿಳಿಸಿದ್ದಾರೆ.
ಕಳೆದ ಡಿಸೆಂಬರ್ 18ರಂದು ವಿಷ್ಣು ಸ್ಮಾರಕದ ಉದ್ಘಾಟನೆಗೆ ಸಮಯ ನಿಗದಿಯಾಗಿತ್ತು. ಕೊನೆ ಹಂತದಲ್ಲಿ ಕಾರ್ಯಕ್ರಮ ಮುಂದೂಡಲಾಗಿತ್ತು.