ಚಿಕ್ಕೋಡಿ: ರಾಜ್ಯಾದ್ಯಂತ ಎಲ್ಲ ಜಿಲ್ಲೆಗಳಲ್ಲಿ ಇಷ್ಟಲಿಂಗಪೂಜೆ ಮಾಡುವ ಮೂಲಕ ಸರ್ಕಾರದ ಗಮನ ಸೆಳೆದು, ಮೀಸಲಾತಿಗಾಗಿ ಒತ್ತಡ ಹೇರಲಾಗುವುದು ಎಂದು ಬಸವಜಯ ಮತ್ಯುಂಜಯ ಸ್ವಾಮೀಜಿ ಹೇಳಿದರು.
ಪಟ್ಟಣದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ನಿಪ್ಪಾಣಿಯಲ್ಲಿ ಸೆ. 10ರಂದು ಛತ್ರಪತಿ ಶಿವಾಜಿ ಮಹಾರಾಜ ಸಾಂಸ್ಕೃತಿಕ ಭವನದಲ್ಲಿ ಬೆಳಗ್ಗೆ 10 ಗಂಟೆಗೆ ಬಹಿರಂಗ ಸಭೆ ನಡೆಸಲಾಗುವುದು. ಬಳಿಕ ಪಾದಯಾತ್ರೆ ಮೂಲಕ ರಾಷ್ಟ್ರೀಯ ಹೆದ್ದಾರಿಗೆ ತೆರಳಿ 15 ನಿಮಿಷ ಇಷ್ಟಲಿಂಗ ಪೂಜೆ ಮಾಡುವ ಮೂಲಕ ಸರ್ಕಾರದ ಗಮನ ಸೆಳೆಯಲಾಗುವುದು. ಸಮುದಾಯದವರು ಪಾಲ್ಗೊಳ್ಳಬೇಕು ಎಂದರು.
ಸಿದಗೌಡ ಪಾಟೀಲ, ಎಸ್.ವೈ. ಹಂಜಿ, ಅಶೋಕ ಹರಗಾಪುರೆ, ರಮೇಶ ಪಾಟೀಲ, ಕುಮಾರ ಪೊಲೀಸ್ ಪಾಟೀಲ,ಕಿರಣ ಪಾಂಗೇರೆ, ಹೊನ್ನಗೌಂಡ ಪಾಟೀಲ ಇತರರು ಇದ್ದರು.
ಚಿಕ್ಕೋಡಿ ಪಟ್ಟಣದಲ್ಲಿ ಹಮ್ಮಿಕೊಂಡಿದ್ದ ಸುದ್ದಿಗೋಷ್ಠಿಯಲ್ಲಿ ಕೂಡಲ ಸಂಗಮ ಪಂಚಮಸಾಲಿ ಪೀಠಾಧ್ಯಕ್ಷ ಬಸವಜಯ ಮತ್ಯುಂಜಯ ಸ್ವಾಮೀಜಿ 2ಎ ಮೀಸಲಾತಿ ಹೋರಾಟದ ಪೋಸ್ಟರ್ ಪ್ರದರ್ಶಿಸಿದರು. ಸಿದ್ದಗೌಡ ಪಾಟೀಲ, ಎಸ್.ವೈ. ಹಂಜಿ, ಆಶೋಕ ಹರಗಾಪುರೆ, ರಮೇಶ ಪಾಟೀಲ ಇತರರಿದ್ದರು.