ಜಿಲ್ಲೆ

ಲಾರಿ, ಕಾರಿನ ನಡುವೆ ಭೀಕರ ಅಪಘಾತ; 3 ಮಂದಿ ಸಾವು, ಮೂವರ ಸ್ಥಿತಿ ಗಂಭೀರ

ಹುಬ್ಬಳ್ಳಿ: ಓಮ್ನಿ ಕಾರು, ಲಾರಿ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ ಮೂವರು ಮೃತಪಟ್ಟು, ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಹುಬ್ಬಳ್ಳಿಯ ಹೆಬಸೂರ ಗ್ರಾಮದ ಬಳಿ ನಡೆದಿದೆ.

ಮೃತರನ್ನು ಕೊಪ್ಪಳ ತಾಲ್ಲೂಕಿನ ಮಂಗಳಾಪುರ ಗ್ರಾಮದ ನಿವಾಸಿಗಳಾದ ಜಾಫರ್​ಸಾಬ್ ​(60), ಮೊಹ್ಮದ್ ಮುಸ್ತಫಾ (36), ಶೋಹೆಬ್ (6)  ಎಂದು ಗುರುತಿಸಲಾಗಿದೆ. ಗಾಯಾಳುಗಳನ್ನು ಧಾರವಾಡದ ಎಸ್​ಡಿಎಂ ಆಸ್ಪತ್ರೆಗೆ ದಾಖಲಿಸಲಾಗಿದೆ.

ಪಾರ್ಶವಾಯುಗೆ ಔಷಧಿ ತರಲೆಂದು ಜಾಫರ್​ಸಾಬ್​ ಕುಟುಂಬದವರ ಜೊತೆ ಉತ್ತರಕನ್ನಡ ಜಿಲ್ಲೆಯ ಕಾರವಾರ ತಾಲ್ಲೂಕಿನ ಹಳಗಾ ಗ್ರಾಮದಲ್ಲಿರುವ ಸೇಂಟ್ ಮೇರಿ ಆಸ್ಪತ್ರೆಗೆ ಹೋಗಿದ್ದರು. ಔಷಧಿ ಪಡೆದು ಊರಿಗೆ ವಾಪಸ್​ ಆಗುತ್ತಿದ್ದ ವೇಳೆ ರಾತ್ರಿ 10 ಗಂಟೆ ಸುಮಾರಿಗೆ ಹೆಬಸೂರ ಗ್ರಾಮದ ಬಳಿಕ ಕಾರು ಹಾಗೂ ಲಾರಿ ನಡುವೆ ಅಪಘಾತದ ಸಂಭವಿಸಿದೆ.

ಅಪಘಾತ ಸಂಭವಿಸಿದ ರಭಸಕ್ಕೆ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದು, ಮೂವರ ಸ್ಥಿತಿ ಗಂಭೀರವಾಗಿದೆ. ಗಾಯಾಳುಗಳನ್ನು ಎಸ್​ಡಿಎಂ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಸ್ಥಳಕ್ಕೆ ಭೇಡಿ ನೀಡಿದ ಹುಬ್ಬಳ್ಳಿ ಗ್ರಾಮೀಣ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.