ಬೆಂಗಳೂರು: ಕುಡಿದ ಮತ್ತಿನಲ್ಲಿ ಬಾಡಿಗೆ ಮನೆಯೊಂದಕ್ಕೆ ನುಗ್ಗಿದ ಐವರು ಪುರುಷರು ಓರ್ವ ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ ( Bengaluru crime) ನಡೆಸಿರುವ ಘಟನೆ ಮಂಗಳವಾರ ರಾತ್ರಿ (ಅ.21) ಬೆಂಗಳೂರಿನಲ್ಲಿ ನಡೆದಿದೆ.
ಐದು ಜನ ಪುರುಷರು ಕುಡಿದ ಮತ್ತಿನಲ್ಲಿ ಮಹಿಳೆ ಇರುವ ಮನೆಯ ಬಾಗಿಲನ್ನು ತಟ್ಟಿ, ಮನೆಯೊಳಗೆ ನುಗ್ಗಿ ಮತ್ತೊಂದು ಕೋಣೆಗೆ ಕರೆದುಕೊಂಡು ಹೋಗಿ ಅತ್ಯಾಚಾರ ನಡೆಸಿದ್ದಾರೆ. ಈ ವೇಳೆ ಆರೋಪಿಗಳು ಆಕೆಯ 2 ಮೊಬೈಲ್ ಫೋನ್‌ಗಳು ಹಾಗೂ 25 ಸಾವಿರ ನಗದು ಹಣವನ್ನು ಕದ್ದಿದ್ದಾರೆ ಎಂದು ಯುವತಿಯು ಆರೋಪಿಸಿ ದೂರು ದಾಖಲಿಸಿದ್ದಾರೆ.
ಇದನ್ನೂ ಓದಿ: Bihar Election | ಪೋಸ್ಟರ್ನಲ್ಲಿ ರಾಹುಲ್ ಗಾಂಧಿ ಪೋಟೋ ಮಾಯ; ಆರ್ಜೆಡಿಗೆ ಕೈ ನಾಯಕ ಬೇಡವಾದರೆ ಎಂದು ಬಿಜೆಪಿ ವ್ಯಂಗ್ಯ
ಈ ಅಪರಾಧದಲ್ಲಿ ಐದು ಜನರು ಭಾಗಿಯಾಗಿದ್ದು, ಅತ್ಯಾಚಾರ ಎಸಗಿದ ಆರೋಪದಡಿ ಮೂವರನ್ನು ಬಂಧಿಸಿದ್ದು, ಇಬ್ಬರು ತಲೆ ಮರೆಸಿಕೊಂಡಿದ್ದಾರೆ ಎಂದು ಪೊಲಿಸರು ತಿಳಿಸಿದ್ದಾರೆ.
ಸಂತ್ರಸ್ತೆಯು ಕೊಲ್ಕಾತ್ತಾ ಮೂಲದ ಮಹಿಳೆ ಬೆಂಗಳೂರಿನಲ್ಲಿ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದಳು. ಆಕೆಯ ದೂರಿನ ಆಧಾರದ ಮೇರೆಗೆ ಪೊಲೀಸರು ಮಾದಕನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
ಬೆಂಗಳೂರು ಗ್ರಾಮಾಂತರ ಎಸ್ಪಿ ಸಿಕೆ ಬಾಬಾ ಘಟನೆ ಬಗ್ಗೆ ಮಾತನಾಡಿದ್ದು, ಈ ಘಟನೆ ತಡರಾತ್ರಿ 9.30 ರಿಂದ 12.15 ರ ನಡುವೆ ನಡೆದಿದೆ. ಆರೋಪಿಗಳು ಸಂತ್ರಸ್ತೆಯ ಬಾಗಿಲು ತಟ್ಟಿ, ಒಳಗೆ ನುಗ್ಗಿ, ಮುಂದಿನ ಕೋಣೆಗೆ ಕರೆದೊಯ್ದು ಅತ್ಯಾಚಾರ ಎಸಗಿದ್ದಾರೆ. ಅಲ್ಲದೆ, ಆಕೆಯಿಂದ ಎರಡು ಮೊಬೈಲ್ ಫೋನ್‌ಗಳು ಮತ್ತು 25,000 ರೂ.ಗಳನ್ನು ಕದ್ದಿದ್ದಾರೆ" ಎಂದು ಸುದ್ದಿಮೂಲಗಳಿಗೆ ತಿಳಿಸಿದ್ದಾರೆ.
ಇದನ್ನೂ ಓದಿ: ನಾನು ಸನ್ಯಾಸ ಸ್ವೀಕರಿಸುತ್ತೇನೆ! ವಿಡಿಯೋ ಮಾಡಿ ಕೊನೆಗೂ ಸ್ಪಷ್ಟನೆ ಕೊಟ್ಟ ನಟಿ ರೇಣು ದೇಸಾಯಿ..Renuu Desai
ಅಪರಾಧದಲ್ಲಿ ಭಾಗಿಯಾಗಿದ್ದ ಮೂವರು ಆರೋಪಿಗಳನ್ನು ಬಂಧಿಸಲಾಗಿದ್ದು, ತಲೆಮರೆಸಿಕೊಂಡಿದ್ದ ಇಬ್ಬರನ್ನು ಪತ್ತೆಹಚ್ಚಲು ಶೋಧ ಕಾರ್ಯ ನಡೆಸುತ್ತಿದ್ದೇವೆ ಎಂದು ಹೇಳಿದರು. (ಏಜೆನ್ಸೀಸ್)