ಮೈಸೂರು: ನಗರದಲ್ಲಿ ಶುಕ್ರವಾರ ಸುರಿದ ಭಾರಿ ಗಾಳಿ-ಮಳೆಯಿಂದಾಗಿ ಎರಡು ಪ್ರತ್ಯೇಕ ಘಟನೆಯಲ್ಲಿ ಜೆಎಸ್‌ಎಸ್ ಆಯುರ್ವೇದ ಕಾಲೇಜಿನ 3 ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ.
ನಗರದ ಲಲಿತ್‌ಮಹಲ್ ಹೆಲಿಪ್ಯಾಡ್ ಹತ್ತಿರ ವಿದ್ಯಾರ್ಥಿ ಸಹನಾ ದ್ವಿಚಕ್ರ ವಾಹನದಲ್ಲಿ ಹೋಗುತ್ತಿದ್ದಾಗ ದಿಢೀರನೆ ಮರ ಉರುಳಿ ಬಿದ್ದಿದ್ದು, ಸಣ್ಣಪುಟ್ಟ ಗಾಯವಾಗಿದೆ. ಜೆಎಸ್‌ಎಸ್ ಆಯುರ್ವೇದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಂಡಿದ್ದಾರೆ.
ಕಾರಂಜಿ ಕೆರೆ ಹತ್ತಿರ ವಿದ್ಯಾರ್ಥಿಗಳಾದ ಅಮೀರ್ ಇರ್ಫಾನ್ ಮತ್ತು ಎಂ.ಡಿ.ಶಂಸುದ್ಧೀನ್ ಮೇಲೆ ಮರ ಬಿದ್ದು ಗಾಯವಾಗಿದೆ.
ಇವರಿಗೆ ಜೆಎಸ್‌ಎಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಪ್ರಾಣಾಪಾಯ ಇಲ್ಲ ಎಂದು ವೈದ್ಯರು ತಿಳಿಸಿದ್ದಾರೆ.