ಯಳಂದೂರು: ತಾಲೂಕಿನ ಅಂಬಳೆ, ಗುಂಬಳ್ಳಿ ಹಾಗೂ ಯರಿಯೂರು ಗ್ರಾಮ ಪಂಚಾಯಿತಿಗಳಲ್ಲಿ ಗುರುವಾರ ನಡೆದ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಗಳಿಗೆ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳು ಆಯ್ಕೆಗೊಂಡರು.
ಅಂಬಳೆ ಗ್ರಾಮ ಪಂಚಾಯಿತಿ: ಒಟ್ಟು 15 ಸದಸ್ಯರಿರುವ ಈ ಗ್ರಾ.ಪಂ.ನಲ್ಲಿ ಪರಿಶಿಷ್ಟ ಜಾತಿ ಮೀಸಲಾಗಿದ ಅಧ್ಯಕ್ಷ ಸ್ಥಾನಕ್ಕೆ ನಂಜುಂಡಸ್ವಾಮಿ ಅವಿರೋಧವಾಗಿ ಆಯ್ಕೆಯಾದರೆ, ಸಾಮಾನ್ಯ ಮಹಿಳೆಗೆ ಮೀಸಲಾಗಿದ್ದ ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆದು ಮಹದೇವಮ್ಮ 9 ಮತಗಳನ್ನು ಪಡೆದು ಆಯ್ಕೆಯಾದರು.
ಯರಿಯೂರು ಗ್ರಾಮ ಪಂಚಾಯಿತಿ: ಒಟ್ಟು 15 ಸದಸ್ಯರಿರುವ ಈ ಗ್ರಾ.ಪಂ.ನಲ್ಲಿ ಪರಿಶಿಷ್ಟ ಪಂಗಡ (ಮಹಿಳೆ) ಮೀಸಲಾಗಿದ್ದ ಅಧ್ಯಕ್ಷ ಸ್ಥಾನಕ್ಕೆ ದೊಡ್ಡಮ್ಮ ನಂಜುಂಡಸ್ವಾಮಿ ಹಾಗೂ ಸಾಮಾನ್ಯ ಕ್ಷೇತ್ರಕ್ಕೆ ಮೀಸಲಾಗಿದ್ದ ಉಪಾಧ್ಯಕ್ಷ ಸ್ಥಾನಕ್ಕೆ ಮಹೇಶ್ ಅವಿರೋಧವಾಗಿ ಆಯ್ಕೆಯಾದರು.
ಗುಂಬಳ್ಳಿ ಗ್ರಾಮ ಪಂಚಾಯಿತಿ: ಒಟ್ಟು 20 ಸದಸ್ಯರಿರುವ ಈ ಗ್ರಾ.ಪಂ.ನಲ್ಲಿ ಸಾಮಾನ್ಯ ಮಹಿಳೆಗೆ ಮೀಸಲಾಗಿದ್ದ ಅಧ್ಯಕ್ಷ ಸ್ಥಾನಕ್ಕೆ ಮೀನಾ ಅವರು 12 ಮತಗಳನ್ನು ಪಡೆದು ಆಯ್ಕೆಯಾದರೆ, ಪರಿಶಿಷ್ಟ ಜಾತಿ ಮೀಸಲಾಗಿದ್ದ ಉಪಾಧ್ಯಕ್ಷ ಸ್ಥಾನಕ್ಕೆ ಶ್ರೀನಿವಾಸ ಅವರು 12 ಮತಗಳನ್ನು ಪಡೆದು ಆಯ್ಕೆಯಾದರು.
ಮಾಜಿ ಶಾಸಕ ಜಯಣ್ಣ, ಜಿ.ಪಂ. ಮಾಜಿ ಉಪಾಧ್ಯಕ್ಷ ಜೆ.ಯೋಗೇಶ್, ಕೃಷ್ಣಪುರ ದೇವರಾಜು, ಪುಟ್ಟಸ್ವಾಮಿ, ಮಹದೇವಶೆಟ್ಟಿ, ಕಂದಹಳ್ಳಿ ಬಸವಣ್ಣ, ಪಿ.ನಟರಾಜು, ಪ್ರವೀಣ್, ಅಭ್ಯರ್ಥಿಗಳಿಗೆ ಶುಭಹಾರೈಸಿದರು.