ಮಂಡ್ಯ: ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಸಹಯೋಗದಲ್ಲಿ ಇಸಫ್ ಸ್ಮಾಲ್ ಫೈನಾನ್ಸ್ ಬ್ಯಾಂಕ್‌ನಲ್ಲಿ ಖಾಲಿ ಇರುವ 30 ಫೀಲ್ಡ್ ಎಕ್ಸಿಕ್ಯೂಟಿವ್ ಹುದ್ದೆಗೆ ಆಯ್ಕೆ ಮಾಡಿಕೊಳ್ಳಲು ಜ.18ರಂದು ನಗರದಲ್ಲಿ ನೇರ ಸಂದರ್ಶನ ಆಯೋಜಿಸಲಾಗಿದೆ.
ಪಿ.ಯು.ಸಿ, ಯಾವುದೇ ಪದವಿ ಉತ್ತೀರ್ಣರಾದ 18 ರಿಂದ 30 ವರ್ಷದೊಳಗಿನ ಅಭ್ಯರ್ಥಿಗಳು ವ್ಯಾಸಂಗಕ್ಕೆ ಸಂಬಂಧಿಸಿದ ದಾಖಲೆ ಹಾಗೂ ಚಾಲನಾ ಪರವಾನಗಿ ಪತ್ರದೊಂದಿಗೆ ಬೆಳಗ್ಗೆ 10.30ಕ್ಕೆ ಅಶೋಕನಗರ, 2ನೇ ಕ್ರಾಸ್‌ನಲ್ಲಿರುವ ಇಸಫ್ ಸ್ಮಾಲ್ ಫೈನಾನ್ಸ್ ಬ್ಯಾಂಕ್‌ನಲ್ಲಿ ಆಯೋಜಿಸಿರುವ ಸಂದರ್ಶನದಲ್ಲಿ ಭಾಗವಹಿಸಬಹುದು. ಮಾಹಿತಿಗಾಗಿ ದೂ.ಸಂ 08232-295124 ಅಥವಾ ಮೊ.ಸಂ 9164642684, 8970646629 ಸಂಪರ್ಕಿಸಬಹುದು ಎಂದು ಜಿಲ್ಲಾ ಉದ್ಯೋಗಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.