ಬೀದರ್: ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಲಭ್ಯ ಅಭಿವೃದ್ಧಿ ನಿಗಮ (ಕೆಎಸ್ಐಐಡಿಸಿ) ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ನಂತರ ಪ್ರಥಮ ಬಾರಿ ನ.30ರಂದು ಜಿಲ್ಲೆಗೆ ಆಗಮಿಸುತ್ತಿರುವ ಡಾ. ಶೈಲೇಂದ್ರ ಬೆಲ್ದಾಳೆ ಅವರಿಗೆ ಅಭಿನಂದನಾ ಸಮಾರಂಭ ಆಯೋಜಿಸಲಾಗಿದೆ. ಅಂದು ಬೆಳಗ್ಗೆ 11ಕ್ಕೆ ಮನ್ನಾಎಖ್ಖೇಳ್ಳಿಯ ಶ್ರೀ ಬಾಲಮ್ಮ ದೇವಿ ದರ್ಶನ ಪಡೆಯುವರು. ನಂತರ ಚಾಂಗಲೇರಾದ ಶ್ರೀ ವೀರಭದ್ರೇಶ್ವರ ದೇವಸ್ಥಾನಕ್ಕೆ ತೆರಳಿ ವಿಶೇಷ ಪೂಜೆ ಮಾಡುವರು. ಬಿಜೆಪಿ ಬೀದರ್ ದಕ್ಷಿಣ ಮಂಡಲ್ ನಿಂದ ಚಾಂಗಲೇರಾದಲ್ಲಿ ಅಭಿನಂದನಾ ಸಮಾರಂಭ ಆಯೋಜಿಸಲಾಗಿದೆ ಎಂದು ದಕ್ಷಿಣ ಮಂಡಲ ಅಧ್ಯಕ್ಷ ರಾಜರೆಡ್ಡಿ ಶಾಬಾದ್, ಜಿಲ್ಲಾ ಕಾರ್ಯದರ್ಶಿ ಜಗನ್ನಾಥ ಪಾಟೀಲ್ ಸಿರಕಟನಳ್ಳಿ ತಿಳಿಸಿದ್ದಾರೆ.