ಚಿತ್ರದುರ್ಗ: ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಲ್ಲಿ ನ.30ರ ಬೆಳಗ್ಗೆ 10 ರಿಂದ ಮಧ್ಯಾಹ್ನ 3 ರವರೆಗೆ ನೇರ ನೇಮಕಾತಿ ಸಂದರ್ಶನ ಹಮ್ಮಿಕೊಳ್ಳಲಾಗಿದೆ. ಮೂರಕ್ಕೂ ಹೆಚ್ಚು ಖಾಸಗಿ ಕಂಪನಿಗಳು ಇದರಲ್ಲಿ ಭಾಗವಹಿಸುತ್ತಿವೆ. ಎಸ್ಸೆಸ್ಸೆಲ್ಸಿ, ಪಿಯುಸಿ, ಡಿಪ್ಲೊಮಾ, ಐಟಿಐ ಅಥವಾ ಯಾವುದೇ ಪದವಿ ಪಡೆದ 18 ರಿಂದ 30 ವರ್ಷ ವಯೋಮಿತಿಯೊಳಗಿನ ಪುರುಷ ಅಥವಾ ಮಹಿಳಾ ಅಭ್ಯರ್ಥಿಗಳು ಸಂದರ್ಶನಕ್ಕೆ ಹಾಜರಾಗಬಹುದು. ಹೆಚ್ಚಿನ ಮಾಹಿತಿಗೆ ಉದ್ಯೋಗ ವಿನಿಮಯ ಕೇಂದ್ರ ಕಚೇರಿ (7022459064)ಸಂಪರ್ಕಿಸಬಹುದೆಂದು ಪ್ರಕಟಣೆ ತಿಳಿಸಿದೆ.