ಧಾರವಾಡ: ಜಿಲ್ಲಾ ತಂಬಾಕು ನಿಯಂತ್ರಣ ಕೋಶವು ಪೊಲೀಸ್ ಹಾಗೂ ಸ್ಥಳೀಯ ಸಂಸ್ಥೆಗಳ ಸಹಕಾರದೊಂದಿಗೆ ಪ್ರಸಕ್ತ ಸಾಲಿನಲ್ಲಿ ೫೭ ಕಾರ್ಯಾಚರಣೆ ಕೈಗೊಂಡಿದೆ. ಕಾನೂನು ಉಲ್ಲಂಘಿಸಿ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುವ, ಸಾರ್ವಜನಿಕ ಸ್ಥಳದಲ್ಲಿ ಧೂಮಪಾನ ಪ್ರಕರಣಗಳಲ್ಲಿ ೧,೩೫,೩೪೦ ರೂ. ದಂಡ ಆಕರಿಸಲಾಗಿದೆ ಎಂದು ಜಿಲ್ಲಾಽಕಾರಿ ಗುರುದತ್ತ ಹೆಗಡೆ ಹೇಳಿದರು.
ತಮ್ಮ ಕಚೇರಿ ಸಭಾಂಗಣದಲ್ಲಿ ರಾಷ್ಟಿçÃಯ ತಂಬಾಕು ನಿಯಂತ್ರಣ ಕಾರ್ಯಕ್ರಮ ಜಿಲ್ಲಾ ಸಮನ್ವಯ ಸಮಿತಿ ಸಭೆ ಹಾಗೂ ಕುಷ್ಠ ರೋಗ ಪ್ರಕರಣ ಪತ್ತೆ ಹಚ್ಚುವ ಅಭಿಯಾನ ಸಮನ್ವಯ ಸಮಿತಿ ಸಭೆಗಳ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಕೋಟ್ಪಾ ಕಾಯ್ದೆಯ ಪರಿಣಾಮಕಾರಿ ಅನುಷ್ಠಾನಕ್ಕೆ ಸಂಬAಽಸಿದ ತಂಡ ತಂಬಾಕು ಉತ್ಪನ್ನ ಮಾರಾಟ ಸ್ಥಳಗಳಿಗೆ ಅನಿರೀಕ್ಷಿತ ಭೇಟಿ, ಕಾರ್ಯಾಚರಣೆ ನಡೆಸಿ ಎಚ್ಚರಿಕೆ ನೀಡಬೇಕು. ಎಲ್ಲ ಶಾಲೆ- ಕಾಲೇಜು ಆವರಣಗಳು ತಂಬಾಕು ಮುಕ್ತ ಆಗುವಂತೆ ಮಾಡಬೇಕು ಎಂದರು.
ಜಿಲ್ಲಾ ಆರೋಗ್ಯ ಅಽಕಾರಿ ಡಾ. ಶಶಿ ಪಾಟೀಲ, ಜಿಲ್ಲಾ ಸಮೀಕ್ಷಣಾಽಕಾರಿ ಡಾ. ಸುಜಾತಾ ಹಸವಿಮಠ ಕಾರ್ಯಕ್ರಮಗಳ ಮಾಹಿತಿ ನೀಡಿದರು.
ಜಿಲ್ಲಾ ಕುಷ್ಠರೋಗ ನಿಯಂತ್ರಣಾಽಕಾರಿ ಡಾ. ಎಸ್.ಬಿ. ಕಳಸೂರಮಠ ಮಾತನಾಡಿ, ಜೂ. ೧೯ರಿಂದ ಜು. ೬ರವರೆಗೆ ಕುಷ್ಠರೋಗ ಪ್ರಕರಣಗಳ ಪತ್ತೆ ಅಭಿಯಾನ ಹಮ್ಮಿಕೊಳ್ಳಲಾಗಿದೆ. ೨೧,೩೭,೧೮೪ ಜನಸಂಖ್ಯೆಯನ್ನು ಸಮೀಕ್ಷೆಗೆ ಒಳಪಡಿಸಲಾಗುವುದು. ಜಿಲ್ಲೆಯಲ್ಲಿ ೮೧ ಜನ ಕುಷ್ಠರೋಗಿಗಳಿದ್ದು, ನಿಯಮಾನುಸಾರ ಚಿಕಿತ್ಸೆ ನೀಡಲಾಗುತ್ತಿದೆ ಎಂದರು.
ಜಿಲ್ಲಾ ಮಲೇರಿಯಾ ನಿಯಂತ್ರಣಾಽಕಾರಿ ಡಾ. ಮಂಜುನಾಥ ಸೊಪ್ಪಿಮಠ, ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ರೇಖಾ ಡೊಳ್ಳಿನ, ತಾಲೂಕು ವೈದ್ಯಾಽಕಾರಿಗಳು ಉಪಸ್ಥಿತರಿದ್ದರು.
ಸಭೆಯ ನಂತರ ಜಿಲ್ಲಾಽಕಾರಿ ಹೆಗಡೆ ಅವರು ಆಶ್ರಿತ ರೋಗಗಳ ನಿಯಂತ್ರಣ ಕಾರ್ಯಕ್ರಮಗಳ ಪ್ರಚಾರ ಸಾಮಗ್ರಿಗಳನ್ನು ಬಿಡುಗಡೆ ಮಾಡಿದರು.