ಜಿಲ್ಲೆ

31ಕ್ಕೆ ಬ್ರಹ್ಮಶ್ರೀ ನಾರಾಯಣಗುರು ಜಯಂತಿ

Shivamogga - Desk - Vinayakumar D B

ಸೊರಬ: ಮಾನವತಾವಾದಿ ಬ್ರಹ್ಮಶ್ರೀ ನಾರಾಯಣಗುರುಗಳ ಜಯಂತ್ಯುತ್ಸವವನ್ನು ಆ.31ರಂದು ಪಟ್ಟಣದ ರಾಜ್ ಕಲಾಕ್ಷೇತ್ರದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ತಾಲೂಕು ಆರ್ಯ ಈಡಿಗ ಸಂಘದ ಅಧ್ಯಕ್ಷ ಕೆ.ಅಜ್ಜಪ್ಪ ಹೇಳಿದರು.

ಸಮಾಜ ಮತ್ತು ಸರ್ಕಾರದ ಸಹಭಾಗಿತ್ವದಲ್ಲಿ ಸಾಂಕೇತಿಕವಾಗಿ ಹಮ್ಮಿಕೊಳ್ಳಲಾಗಿದೆ. ಮುಂದಿನ ತಿಂಗಳ ಮೊದಲ ವಾರದಲ್ಲಿ ಸಮಾಜದಿಂದ ಶ್ರೀ ನಾರಾಯಣಗುರುಗಳ ಜಯಂತಿಯನ್ನು ದೊಡ್ಡ ಮಟ್ಟದಲ್ಲಿ ಹಮ್ಮಿಕೊಳ್ಳಲಾಗುವುದು. ಮಾಜಿ ಸಚಿವ ಕಾಗೋಡು ತಿಮ್ಮಪ್ಪ, ಸಚಿವ ಮಧು ಬಂಗಾರಪ್ಪ, ಎಸ್‌ಎಸ್‌ಎಲ್‌ಸಿ ಹಾಗೂ ದ್ವಿತೀಯ ಪಿಯುಸಿ, ವಿವಿಧ ಪದವಿಗಳಲ್ಲಿ ಅತಿ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳು, ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದವರನ್ನು ಸನ್ಮಾನಿಸಲಾಗುವುದು ಎಂದು ಹೇಳಿದರು.
ನಿರ್ದೇಶಕರಾದ ಪರಶುರಾಮ ಸಣ್ಣಬೈಲು, ಜಗದೀಶ್ ಕೊಡಕಣಿ, ಡಾಕಪ್ಪ ಪಾಣಿ ಇತರರಿದ್ದರು.