ಜಿಲ್ಲೆ

31ರಂದು ಭೂ ಕಬಳಿಕೆ ನಿಷೇಧ ಕಾಯ್ದೆ ಕಾರ‌್ಯಾಗಾರ

ಚಿತ್ರದುರ್ಗ:ಕರ್ನಾಟಕ ಭೂ ಕಬಳಿಕೆ ನಿಷೇಧ ವಿಶೇಷ ನ್ಯಾಯಾಲಯ,ಕಂದಾಯ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ಜಿಲ್ಲಾಡಳಿತದಿಂದ ಆ.31ರಂದು ಬೆಳಗ್ಗೆ 10ಕ್ಕೆ ಜಿಪಂದಲ್ಲಿ ಕರ್ನಾಟಕ ಭೂ ಕಬಳಿಕೆ ನಿಷೇಧ ಅಧಿನಿಯಮ ಮತ್ತು ಸಂಬಂಧಿಸಿದ ಕಾಯ್ದೆಗಳ ಬಗ್ಗೆ ಒಂದು ದಿನದ ಕಾರ್ಯಾಗಾರ ಆಯೋಜಿಸಲಾಗಿದೆ.
ವಿಶೇಷ ನ್ಯಾಯಾಲಯದ ಅಧ್ಯಕ್ಷ ನ್ಯಾಯಮೂರ್ತಿ ಬಿ.ಎ.ಪಾಟೀಲ್ ಅವರು ಕಾರ‌್ಯಾಗಾರ ಉದ್ಘಾಟಿಸುವರು. ಡಿಸಿ ಟಿ.ವೆಂಕಟೇಶ್ ಅಧ್ಯಕ್ಷತೆ ವಹಿಸುವರು. ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ರೋಣವಾಸುದೇವ್, ಜಿಪಂ ಎಸ್.ಜೆ.ಸೋಮಶೇಖರ್,ಎಸ್‌ಪಿ ರಂ ಜಿತ್‌ಕುಮಾರ್ ಬಂಡಾರು ಭಾಗವಹಿಸುವರು. ಸಂಜೆ 4.30 ರಿಂದ 5ರವರೆಗೆ ಸಮಾರೋಪ ಸಮಾರಂಭ ನಡೆಯಲಿದೆ ಎಂದು ಪ್ರಕ ಟಣೆ ತಿಳಿಸಿದೆ.