ಹಾಸನ: ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಆಯುಕ್ತರ ನಿರ್ದೇಶನದಂತೆ ಪಡಿತರ ಚೀಟಿ ಫಲಾನುಭವಿಗಳ ಇ-ಕೆವೈಸಿ ಸಂಗ್ರಹಣೆಯನ್ನು ಆ.31ರೊಳಗಾಗಿ ಪೂರ್ಣಗೊಳಿಸುವಂತೆ ಸೂಚನೆ ನೀಡಿದ್ದಾರೆ. ಪ್ರಸ್ತುತ ಇ-ಕೆವೈಸಿ ಆಗದ ಪಡಿತರ ಚೀಟಿದಾರರ ಹೆಸರುಗಳನ್ನು ಸಂಬಂಧಪಟ್ಟ ನ್ಯಾಯಬೆಲೆ ಅಂಗಡಿ ಮುಂದೆ ಪ್ರದರ್ಶಿಸಲಾಗಿದ್ದು, ಇ-ಕೆವೈಸಿ ಆಗದ ಪಡಿತರ ಚೀಟಿದಾರರು ಸಂಬಂಧಪಟ್ಟ ನ್ಯಾಯಬೆಲೆ ಅಂಗಡಿಗಳಿಗೆ ಹೋಗಿ ಇ-ಕೆವೈಸಿ ಮಾಡಿಸಿಕೊಳ್ಳುವಂತೆ ಕೋರಲಾಗಿದೆ.
ಪಡಿತರ ಚೀಟಿ ಫಲಾನುಭವಿಗಳ ಇ-ಕೆವೈಸಿ ಸಂಗ್ರಹಣೆಯನ್ನು ಆ.31ರೊಳಗಾಗಿ ಪೂರ್ಣಗೊಳಿಸದೆ ಇದ್ದಲ್ಲಿ ಅಂತಹ ಪಡಿತರ ಚೀಟಿಗಳ ಸದಸ್ಯರನ್ನು ಪಡಿತರ ಚೀಟಿಯಿಂದ ಅಮಾನತ್ತುಗೊಳಿಸಲಾಗುವುದು ಮತ್ತು ಈ ಫಲಾನುಭವಿಗಳಿಗೆ ಆಹಾರ ಧಾನ್ಯ ಮತ್ತು ಡಿಬಿಟಿ ನಗದು ಸೌಲಭ್ಯವನ್ನು ಸೆಪ್ಟೆಂಬರ್‌ನಿಂದ ಸ್ಥಗಿತಗೊಳಿಸಲಾಗುವುದು (ವಿನಾಯಿತಿ ನೀಡಲಾದ ಪಡಿತರ ಚೀಟಿಗಳನ್ನು ಹೊರತುಪಡಿಸಿ) ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.