ಕಂದಾಯ ಸಚಿವ ಆರ್.ಅಶೋಕ್ ಅವರನ್ನು ಎಚ್.ಡಿ.ಕೋಟೆಯಲ್ಲಿ ಆದಿವಾಸಿ ಬುಡಕಟ್ಟು ಕೃಷಿಕರ ಸಂಘದ ಸದಸ್ಯರು ಭೇಟಿ ಮಾಡಿ ಮನವಿ ಸಲ್ಲಿಸಿದರು. ವಿಠಲ್ ನಾಣಚ್ಚಿ, ವಿಜಯ ಕುಮಾರ್, ಜಯಪ್ಪ ಇದ್ದರು. 
ಜಿಲ್ಲೆ

3418 ಆದಿವಾಸಿ ಕುಟುಂಬಗಳಿಗೆ ಪುನರ್ವಸತಿ ಕಲ್ಪಿಸಿ

ಹುಣಸೂರು: ನಾಗರಹೊಳೆ ರಾಷ್ಟ್ರೀಯ ಉದ್ಯಾನದಿಂದ ಹೊರಹಾಕಲ್ಪಟ್ಟ 3418 ಆದಿವಾಸಿ ಕುಟುಂಬಗಳಿಗೆ ಶೀಘ್ರ ಪುನರ್ವಸತಿ ಕಲ್ಪಿಸಬೇಕೆಂದು ಆದಿವಾಸಿ ಬುಡಕಟ್ಟು ಕೃಷಿಕರ ಸಂಘದ ಜಿಲ್ಲಾಧ್ಯಕ್ಷ ಪಿ.ಕೆ.ರಾಮು ಕಂದಾಯ ಸಚಿವರನ್ನು ಒತ್ತಾಯಿಸಿದ್ದಾರೆ.

ಎಚ್.ಡಿ.ಕೋಟೆ ತಾಲೂಕಿನ ಹೊಸಳ್ಳಿ ಗಿರಿಜನ ಹಾಡಿಯಲ್ಲಿ ಕಂದಾಯ ಸಚಿವ ಆರ್.ಅಶೋಕ್ ಅವರನ್ನು ಇತ್ತೀಚೆಗೆ ಸಂಘದ ಸದಸ್ಯರೊಂದಿಗೆ ಭೇಟಿ ಮಾಡಿ ಮನವಿ ಪತ್ರ ಸಲ್ಲಿಸಿದರು.
ನಾಗರಹೊಳೆ ರಾಷ್ಟ್ರೀಯ ಉದ್ಯಾನದಿಂದ ಹೊರಹಾಕಿದ 3418 ಕುಟುಂಬಗಳಿಗೆ ಪುನರ್ವಸತಿ ನೀಡುವ ಮೂಲಕ ಗೌರವಯುತ ಬದುಕು ಕಟ್ಟಿಕೊಳ್ಳಲು ಸರ್ಕಾರ ಕೂಡಲೇ ಕ್ರಮ ವಹಿಸಬೇಕೆಂದು ಹೈ ಕೋರ್ಟ್ 2014ರಲ್ಲಿ ಆದೇಶಿಸಿದೆ. ಆದರೆ ಸರ್ಕಾರ ಇನ್ನೂ ಕ್ರಮ ವಹಿಸದಿರುವುದರಿಂದ ಗಿರಿಜನರಿಗೆ ಮಾಡಿದ ದೊಡ್ಡ ಅನ್ಯಾಯವಾಗಿದೆ. ಗಿರಿಜನರಿಗೆ ಒಳಮಿಸಲಾತಿ ನೀಡುವುದರ ಜತೆಗೆ ಎಲ್ಲ ಹಾಡಿಗಳನ್ನೂ ಕಂದಾಯ ಗ್ರಾಮಗಳಾಗಿ ಘೋಷಿಸಬೇಕು. ಅಲ್ಪಸ್ವಲ್ಪ ನೀಡಿರುವ ಭೂಮಿಗೆ ಪೋಡು ಮಾಡಿಸಿ ಕೊಡಬೇಕು, ಸ್ಮಶಾನಗಳಿಗೆ ಜಾಗ ಗುರುತಿಸಿ ಮೀಸಲಿರಿಸಬೇಕೆಂದು ಸಚಿವರಲ್ಲಿ ಮನವಿ ಸಲ್ಲಿಸಲಾಗಿದೆ ಎಂದು ಹೇಳಿಕೆಯಲ್ಲಿ ತಿಳಿಸಿದ್ದಾರೆ.