ಜಿಲ್ಲೆ

371 J ಸಂಪುಟದ ಉಪ ಸಮಿತಿಗೆ ಪ್ರಿಯಾಂಕ್ ಖರ್ಗೆ ಅಧ್ಯಕ್ಷ

ಖರ್ಗೆ ಅಧ್ಯಕ್ಷತೆಯಲ್ಲಿ ೩೭೧ ಜೆ ಸಂಪುಟದ ಉಪ ಸಮಿತಿ ರಚನೆ
ಕಲಬುರಗಿ : ಸಂವಿಧಾನದ ೩೭೧ (ಜೆ) ಅನುಷ್ಠಾನ ಪರಾಮರ್ಶಿಸಲು ಮತ್ತು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವುದನ್ನು ನಿಗಾ ಮಾಡಲು ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅಧ್ಯಕ್ಷತೆಯಲ್ಲಿ ಸಚಿವ ಸಂಪುಟದ ಉಪ ಸಮಿತಿಯನ್ನು ರಚನೆ ಮಾಡಿ ಸಚಿವ ಸಂಪುಟದ ಸರ್ಕಾರದ ಜಂಟಿ ಕಾರ್ಯದರ್ಶಿ ಆರ್.ಚಂದ್ರಶೇಖರ ಆದೇಶ ಹೊರಡಿಸಿದ್ಧಾರೆ.
ಪ್ರಿಯಾಂಕ್ ಖರ್ಗೆ ಅವರು ಎರಡನೇ ಸಲ ಈ ಸಚಿವ ಸಂಪುಟದ ಉಪ ಸಮಿತಿಯ ಅಧ್ಯಕ್ಷರಾಗುತ್ತಿದ್ದಾರೆ. ಈ ಹಿಂದೆಯೂ ಕುಮಾರಸ್ವಾಮಿ ಸರ್ಕಾರದಲ್ಲಿ ಅಧ್ಯಕ್ಷರಾಗಿದ್ದರು.
ಉಪ ಸಮಿತಿಗೆ ಸದಸ್ಯರಾಗಿ ಅರಣ್ಯ ಸಚಿವ ಈಶ್ವರ ಖಂಡ್ರೆ, ಪೌರಾಡಳಿತ ಸಚಿವ ರಹಿಂಖಾನ್, ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ ಪಾಟೀಲ್, ಯೋಜನೆ, ಕಾರ್ಯಕ್ರಮ, ಸಂಯೋಜನೆ ಮತ್ತು ಸಾಂಖ್ಯಿಕ ಸಚಿವ ಡಿ.ಸುಧಾರಕರ್, ಯುವಜನ ಹಾಗೂ ಕ್ರೀಡಾ ಸಚಿವ ಬಿ.ನಾಗೇಂದ್ರ ಹಾಗೂ ಸಣ್ಣ ನೀರಾವರಿ ಸಚಿವ ಎನ್.ಎಸ್.ಭೋಸರಾಜು ಅವರು ನೇಕಮಗೊಂಡಿದ್ದಾರೆ.
೩೭೧ (ಜೆ) ಅನುಷ್ಠಾನ ಕುರಿತ ಗೊಂದಲಗಳ ಕುರಿತ ಸಮಸ್ಯೆಗಳನ್ನು ಹೋಗಲಾಡಿಸಲು ಶೀಘ್ರದಲ್ಲಿಯೇ ಸಮಿತಿ ಸಭೆಯನ್ನು ನಡೆಸಲಾಗುವುದು ಎಂದು ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.