ಜಿಲ್ಲೆ

3,710 ಕೆಜಿ ಪ್ಲಾಸ್ಟಿಕ್ ವಸ್ತುಗಳು ವಶಕ್ಕೆ

ಮಂಜುನಾಥ ತಿಮ್ಮಯ್ಯ

ಮೈಸೂರು: ನಗರದಲ್ಲಿ ಮಹಾನಗರ ಪಾಲಿಕೆ ಅಧಿಕಾರಿಗಳು ಸೋಮವಾರ ಕಾರ್ಯಾಚರಣೆ ನಡೆಸಿ 3,710 ಕೆಜಿ ಪ್ಲಾಸ್ಟಿಕ್ ವಸ್ತುಗಳನ್ನು ಜಪ್ತಿ ಮಾಡಿದರು.


ಪಾಲಿಕೆಯ ವಲಯಕಚೇರಿ 1ರ ವ್ಯಾಪ್ತಿಯ ವಾರ್ಡ್ ನಂಬರ್ 51ರ ಹರಿಶ್ಚಂದ್ರ ರಸ್ತೆಯಲ್ಲಿ ಬಹು ದಿನಗಳಿಂದ ಪ್ರಿಂಟ್ ಬ್ಯಾಗ್‌ಗಳನ್ನು ಮುದ್ರಿಸುತ್ತಿದ್ದ ‘ಆರಂಭ’ ಎಂಬ ಮಳಿಗೆಗೆ ಪಾಲಿಕೆ ಆಯುಕ್ತ ಆಶಾದ್ ಉರ್ ರೆಹಮಾನ್ ಶರೀಫ್ ನೇತೃತ್ವದಲ್ಲಿ ದಾಳಿ ಮಾಡಿ ಪರಿಶೀಲನೆ ಮಾಡಲಾಯಿತು.

ಅಲ್ಲಿ ಪತ್ತೆಯಾದ ಪ್ಲಾಸ್ಟಿಕ್ ಉತ್ಪನ್ನಗಳನ್ನು ವಶಪಡಿಸಿಕೊಳ್ಳಲಾಗಿದೆ.


ಪಾಲಿಕೆ ಸಹಾಯಕ ಆಯುಕ್ತ ಮಂಜುನಾಥ್ ರೆಡ್ಡಿ, ಆರೋಗ್ಯಾಧಿಕಾರಿ ವೆಂಕಟೇಶ್, ಸಹಾಯಕ ಕಾರ್ಯಪಾಲಕ ಇಂಜಿನಿಯರ್‌ಗಳಾದ ಮಧುಕರ್, ಮೀನಾಕ್ಷಿ, ಪರಿಸರ ಇಂಜಿನಿಯರ್ ಜ್ಯೋತಿ, ಹಿರಿಯ ಆರೋಗ್ಯ ನಿರೀಕ್ಷಕ ಶಿವಪ್ರಸಾದ್, ಕಿರಿಯ ಆರೋಗ್ಯ ನಿರೀಕ್ಷಕರಾದ ಪ್ರೀತಿ, ಶೋಭಾ ಇನ್ನಿತರರಿದ್ದರು.