ಜಿಲ್ಲೆ

ಕೃಷಿ ಸಂಬಂಧಿಸಿದಂತೆ 378 ಮೊಬೈಲ್ ಆ್ಯಪ್ ಅಭಿವೃದ್ಧಿ

ಜಗದೀಶ ಹೊಂಬಳಿ

ಬೆಳಗಾವಿ: ಕೃಷಿ ಕ್ಷೇತ್ರದಲ್ಲಿ ತಂತ್ರಜ್ಞಾನ ಬಳಕೆ ಅಳವಡಿಸಿಕೊಳ್ಳಲು ಕಿಸಾನ್ ಸಾರಥಿ ಎಂಬ ಡಿಜಿಟಲ್ ಮಲ್ಟಿಮೀಡಿಯಾ ವೇದಿಕೆಯನ್ನು ರಚಿಸಲಾಗಿದೆ. ಭಾರತೀಯ ಕೃಷಿ ಸಂಶೋಧನಾ ಮಂಡಳಿ (ಐಸಿಎಆರ್) ಸಂಸ್ಥೆಗಳ ಮೂಲಕ ರೈತರ ಅನುಕೂಲಕ್ಕಾಗಿ ಕೃಷಿ ಮತ್ತು ಸಂಬಂಧಿತ ಕ್ಷೇತ್ರದ ವಿವಿಧ ಅಂಶಗಳ ಬಗ್ಗೆ 378 ಮೊಬೈಲ್ ಅಪ್ಲಿಕೇಶನ್‌ಗಳನ್ನು ಅಭಿವೃದ್ಧಿಪಡಿಸಿ ದೇಶ ಶಾದ್ಯಂತ 731 ಕೆವಿಕೆಗಳ ಮೂಲಕ ರೈತರಿಗೆ ಸಲಹೆಗಳನ್ನು ನೀಡಲು ಬಳಸಲಾಗುತ್ತಿದೆ ಎಂದು ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಸಚಿವ ನರೇಂದ್ರ ಸಿಂಗ್ ತೋಮರ್ ಅವರು ರಾಜ್ಯಸಭೆಗೆ ಲಿಖಿತ ಉತ್ತರದಲ್ಲಿ ತಿಳಿಸಿದರು.
 ನವದೆಹಲಿಯಲ್ಲಿ ನಡೆಯುತ್ತಿರುವ ರಾಜ್ಯಸಭೆಯ ಮುಂಗಾರು ಅಧಿವೇಶನದಲ್ಲಿ ಕೃಷಿಯಲ್ಲಿ ತಂತ್ರಜ್ಞಾನದ ಬಳಕೆ ಕುರಿತು ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಅವರು ಕೇಳಿದ ಪ್ರಶ್ನೆಗೆ ಸಚಿವರು ಉತ್ತರಿಸಿದರು. ಜೂ.28ರ ಭಾರತೀಯ ಟೆಲಿಕಾಂ ನಿಯಂತ್ರಣ ಪ್ರಾಧಿಕಾರದ ವರದಿಯ ಪ್ರಕಾರ, ದೇಶದಲ್ಲಿ ರೈತರು ಸೇರಿ 1,143 ಮಿಲಿಯನ್ ವೈರ್‌ಲೆಸ್ ಟೆಲಿಕಾಂ ಚಂದಾದಾರರಿದ್ದಾರೆ. ದೇಶದಲ್ಲಿ ಇಂಟರ್ನೆಟ್ ಮತ್ತು ಸ್ಮಾರ್ಟ್‌ಫೋನ್‌ಗಳ ಬಳಕೆ ಹೆಚ್ಚುತ್ತಿರುವುದರಿಂದಢ ಸಚಿವಾಲಯವು ವೆಬ್‌ಸೈಟ್ ಮತ್ತು ಮೊಬೈಲ್ ಅಪ್ಲಿಕೇಶನ್‌ಗಳು ಸೇರಿ ವಿವಿಧ ಡಿಜಿಟಲ್ ಪ್ಲಾಟ್‌ಫಾರ್ಮ್ಗಳ ಮೂಲಕ ದೇಶದ ರೈತರನ್ನು ತಲುಪುತ್ತಿದೆ ಎಂದು ಉತ್ತರಿಸಿದರು.