ನಾಪೋಕ್ಲು: ಪೆರಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ 7ನೇ ವಾರ್ಷಿಕ ಮಹಾಸಭೆ ಪೆರಾಜೆಯ ಅನ್ನಪೂರ್ಣೇಶ್ವರಿ ಕಲಾಮಂದಿರದಲ್ಲಿ ಮಂಗಳವಾರ ನಡೆಯಿತು.
ಸಹಕಾರ ಸಂಘದ ಅಧ್ಯಕ್ಷ ನಾಗೇಶ್ ಕುಂದಲ್ಪಾಡಿ ಮಾತನಾಡಿ, ಸಂಘ 193 ಕೋಟಿ ರೂ. ವ್ಯವಹಾರ ನಡೆಸಿ 38.47 ಲಕ್ಷ ರೂ. ಲಾಭ ಗಳಿಸಿದೆ. ವಿಶೇಷವಾಗಿ ರಬ್ಬರ್ ವ್ಯವಹಾರ ಮಾಡಿದ ಸದಸ್ಯರಿಗೆ ಕೆಜಿಗೆ 2.ನಂತೆ ಪ್ರೋತ್ಸಾಹ ಧನ ನೀಡಲು 5.95 ಲಕ್ಷ ರೂ. ಕಾಯ್ದಿರಿಸಲಾಗಿದೆ. ಸದಸ್ಯರಿಗೆ ಶೇ.8ರಂತೆ ಡಿವಿಡೆಂಡ್ ಘೋಷಿಸಲಾಗಿದೆ ಎಂದರು.
ಸಂಘದ ಉಪಾಧ್ಯಕ್ಷ ಪಿ.ಎಂ.ಅಶೋಕ್, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಲೋಕೇಶ್, ನಿರ್ದೇಶಕರಾದ ಹೊನ್ನಪ್ಪ ಅಮಚೂರು, ಬಿ.ಜಯರಾಮ ನಿಡ್ಯಮಲೆ, ಸೀತಾರಾಮ ಕದಿಕಡ್ಕ, ಧನಂಜಯ ಕೋಡಿ, ಪ್ರಮೀಳಾ ಬಂಗಾರಕೋಡಿ, ಪುಷ್ಪಾವತಿ ವ್ಯಾಪಾರೆ, ಕೆ.ಎಂ.ಪ್ರದೀಪ್, ದೀನರಾಜ್ ದೊಡ್ಡಡ್ಕ, ಶೇಷಪ್ಪ ನಾಯ್ಕ ನಿಡ್ಯಮಲೆ, ಪಿ.ಟಿ.ಜಯರಾಮ, ಕಿರಣ್ ಬಂಗಾರಕೋಡಿ ಇತರರಿದ್ದರು.