ಜಿಲ್ಲೆ

4.42 ಲಕ್ಷ ರೂ. ಮೌಲ್ಯದ ಅಕ್ಕಿ ವಶ

ಮರಿದೇವ ಹೂಗಾರ

ಹುಬ್ಬಳ್ಳಿ: ಬಡವರಿಗೆ ವಿತರಣೆ ಮಾಡಬೇಕಿದ್ದ ಪಡಿತರ ಅಕ್ಕಿಯನ್ನು ಅಕ್ರಮವಾಗಿ ಸಂಗ್ರಹ ಮಾಡಿದ್ದ ಮಳಿಗೆ ಪತ್ತೆ ಹಚ್ಚಿದ ಇಲ್ಲಿನ ಸಿಸಿಬಿ ವಿಭಾಗದ ಪೊಲೀಸರ ತಂಡವು ಶನಿವಾರ ದಿಢೀರ್ ದಾಳಿ ನಡೆಸಿ, ಒಬ್ಬನನ್ನು ವಶಕ್ಕೆ ಪಡೆದಿದೆ. 4.42 ಲಕ್ಷ ರೂ. ಮೌಲ್ಯದ 130 ಕ್ವಿಂಟಾಲ್ ಪಡಿತರ ಅಕ್ಕಿಯನ್ನು ಜಪ್ತಿ ಮಾಡಿದೆ.
ಅಮರಗೋಳ ಎಪಿಎಂಸಿಯ ಗೋದಾಮಿನಲ್ಲಿ ಅಕ್ರಮವಾಗಿ ಪಡಿತರ ಅಕ್ಕಿ ಸಂಗ್ರಹ ಮಾಡಿ ನಂತರ ಅದನ್ನು ಕಾಳಸಂತೆಯಲ್ಲಿ ಹೆಚ್ಚಿನ ಬೆಲೆಗೆ ಮಾರಾಟ ಮಾಡಲು ಯೋಜನೆ ರೂಪಿಸಿದ್ದ ಆರೋಪಿಯು ಸಿಸಿಬಿ ತಂಡದ ಕೈಗೆ ಸಿಕ್ಕಿ ಬಿದ್ದಿದ್ದಾನೆ. ಎಪಿಎಂಸಿ ನವನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.