ಜಿಲ್ಲೆ

ಎಸ್‌ಎಸ್‌ಎಲ್‌ಸಿ ಪರೀಕ್ಷೆ; ನಕಲು ಮಾಡುತ್ತಿದ್ದ 4 ವಿದ್ಯಾರ್ಥಿಗಳು ಡಿಬಾರ್

ಮಂಜುನಾಥ ಅಂಗಡಿ

ಧಾರವಾಡ: ಜಿಲ್ಲೆಯಲ್ಲಿ ಬುಧವಾರ ಜರುಗಿದ ಎಸ್‌ಎಸ್‌ಎಲ್‌ಸಿ ಸಮಾಜ ವಿಜ್ಞಾನ ಪರೀಕ್ಷೆ ವೇಳೆ ನಕಲು ಮಾಡುತ್ತಿದ್ದ ನಾಲ್ವರು ವಿದ್ಯಾರ್ಥಿಗಳನ್ನು ಡಿಬಾರ್ ಮಾಡಲಾಗಿದೆ.
ಹುಬ್ಬಳ್ಳಿ ಶಹರದ ಅಂಜುಮನ್ ಉರ್ದು ಪ್ರೌಢಶಾಲೆಯಲ್ಲಿ ಇಬ್ಬರು ಮತ್ತು ಹುಬ್ಬಳ್ಳಿ ಶಹರದ ಡಾ. ಜಿ.ವಿ. ಜೋಶಿ ರೋಟರಿ ಆಂಗ್ಲ ಮÁಧ್ಯಮ ಪ್ರೌಢಶಾಲೆಯಲ್ಲಿ ಓರ್ವ ಹಾಗೂ ಹುಬ್ಬಳ್ಳಿ ಗ್ರಾಮೀಣ ತಾಲೂಕಿನ ಕುಸುಗಲ್ಲ ಗ್ರಾಮದ ಸರಕಾರಿ ಪ್ರೌಢಶಾಲೆಯಲ್ಲಿ ಓರ್ವ ವಿದ್ಯಾರ್ಥಿಯನ್ನು ಡಿಬಾರ್ ಮÁಡಲಾಗಿದೆ.
ಸಮÁಜ ವಿಜ್ಞಾನ ವಿಷಯಕ್ಕೆ ೨೮,೦೯೫ ವಿದ್ಯಾರ್ಥಿಗಳು ಹಾಜರಾಗಿದ್ದರೆ ೩೦೨ ವಿದ್ಯಾರ್ಥಿಗಳು ಗೈರುಹಾಜರಾಗಿದ್ದರು. ಜಾಗೃತ ದಳದ ಅಽಕಾರಿಗಳ ಕಾರ್ಯಾಚರಣೆಯಲ್ಲಿ ಪರೀಕ್ಷಾ ಅಕ್ರಮ ಪತ್ತೆಯಾಗಿದ್ದು, ನಾಲ್ವರನ್ನು ಡಿಬಾರ್ ಮಾಡಲಾಗಿದೆ ಎಂದು ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಎಸ್.ಎಸ್. ಕೆಳದಿಮಠ ತಿಳಿಸಿದ್ದಾರೆ.