ಜಿಲ್ಲೆ

4 ಸಾವಿರಕ್ಕೂ ಹೆಚ್ಚು ಜನರಗೆ ಹಕ್ಕುಪತ್ರ

ಹಗರಿಬೊಮ್ಮನಹಳ್ಳಿ: ರಾಜ್ಯ ಸರ್ಕಾರದ ಸಮರ್ಪಣೆ ಸಂಕಲ್ಪ ಸಮಾವೇಶದಲ್ಲಿ ತಾಲೂಕಿನ ನಾಲ್ಕು ಸಾವಿರಕ್ಕೂ ಹೆಚ್ಚು ಫಲಾನುಭವಿಗಳಿಗೆ ಹಕ್ಕುಪತ್ರಗಳನ್ನು ನೀಡಲು ಸಿದ್ಧತೆ ಮಾಡಿಕೊಳ್ಳಲಾಗಿದೆ.

ಮೇ 1ರಿಂದಲೇ ಈ ಕುರಿತ ತಯಾರಿ ನಡೆಸಲಾಗಿದೆ. ಗ್ರಾಮಲೆಕ್ಕಾಧಿಕಾರಿಗಳು ರಜೆ ದಿನಗಳಲ್ಲೂ ಕೆಲಸ ಮಾಡಿದ್ದಾರೆ. ಜಿಲ್ಲಾಧಿಕಾರಿ ಹಾಗೂ ತಹಸೀಲ್ದಾರ್ ಸಹಕಾರದೊಂದಿಗೆ ಸರ್ಕಾರ ನೀಡಿರುವ ಜವಾಬ್ದಾರಿ ನಿರ್ವಹಿಸಿರುವುದಾಗಿ ಗ್ರಾಮ ಆಡಳಿತಾಧಿಕಾರಿ ಯಂಕಾರೆಡ್ಡಿ ತಿಳಿಸಿದರು.