ಜಿಲ್ಲೆ

47 ಕರೊನಾ ಪಾಸಿಟಿವ್

madikerimailmanju

ಚಿಕ್ಕಮಗಳೂರು: ಜಿಲ್ಲೆಯಲ್ಲಿ ಶುಕ್ರವಾರ 47 ಕರೊನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದ್ದು 9 ಮಂದಿ ಗುಣ ಹೊಂದಿ ಬಿಡುಗಡೆಯಾಗಿದ್ದಾರೆ. ಗುರುವಾರ ಒಂದೇ ದಿನ 51 ಪ್ರಕರಣಗಳು ಪತ್ತೆಯಾಗಿವೆ. ಶುಕ್ರವಾರ ಪತ್ತೆಯಾದವರಲ್ಲಿ 45 ಮಂದಿ ಹೋಂ ಐಸೊಲೇಶನ್, ಡಿಸಿಎಚ್‍ಸಿ ಹಾಗೂ ಖಾಸಗಿ ಅಸ್ಪತ್ರೆಯಲ್ಲಿ ತಲಾ ಒಬ್ಬರು ಚಿಕಿತ್ಸೆ ಪಡೆಯುತ್ತಿದ್ದು, ಒಟ್ಟು 204 ಮಂದಿ ಚಿಕಿತ್ಸೆಯಲ್ಲಿದ್ದಾರೆ.

26 ವಿದ್ಯಾರ್ಥಿಗಳಲ್ಲಿ ಕರೊನಾ:

ಎರಡು ದಿನದ ಹಿಂದೆ ಓರ್ವ ವಿದ್ಯಾರ್ಥಿನಿಯಲ್ಲಿ ಪಾಸಿಟಿವ್ ಪತ್ತೆಯಾದ ಹಿನ್ನೆಲೆಯಲ್ಲಿ ನಗರದ ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜಿನಲ್ಲಿ 581 ವಿದ್ಯಾರ್ಥಿಗಳನ್ನು ಕರೊನಾ ತಪಾಸಣೆಗೆ ಒಳಪಡಿಸಲಾಗಿತ್ತು. ಅವರಲ್ಲಿ 26 ವಿದ್ಯಾರ್ಥಿಗಳಲ್ಲಿ ಸೋಂಕಿರುವುದು ದೃಢಪಟ್ಟಿದೆ. ಇವರಲ್ಲಿ ಪ್ರೌಢಶಾಲಾ ವಿಭಾಗದ 25 ವಿದ್ಯಾರ್ಥಿಗಳು ಹಾಗೂ ಪದವಿ ಪೂರ್ವ ಕಾಲೇಜಿನ ಓರ್ವ ವಿದ್ಯಾರ್ಥಿನಿ ಸೇರಿದ್ದಾರೆ. ಶುಕ್ರವಾರ ಪತ್ತೆಯಾದ ಪ್ರಕರಣದಲ್ಲಿ ಇವು ಕೂಡ ಸೇರಿವೆ.