ಜಿಲ್ಲೆ

ವಾಂತಿ-ಬೇಧಿಯಿಂದ 47 ವಿದ್ಯಾರ್ಥಿನಿಯರು ಆಸ್ಪತ್ರೆಗೆ ದಾಖಲು

ಬೆಂಗಳೂರು: ಬೆಂಗಳೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆ (ಬಿಎಂಸಿಆರ್‌ಐ)ಯ ಬಾಲಕಿಯರ ಹಾಸ್ಟೆಲ್‌ನ 47 ವಿದ್ಯಾರ್ಥಿನಿಯರು ವಾಂತಿ ಬೇಧಿ ಯಿಂದ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಇವರಲ್ಲಿ 28 ಮಂದಿ ಎಮರ್ಜೆನ್ಸಿ ಟ್ರಾಮಾ ಕೇರ್ ಸೆಂಟರ್‌ನಲ್ಲಿ ಹಾಗೂ 15 ಮಂದಿ ಎಚ್. ಬ್ಲಾಕ್ ನಲ್ಲಿ ಮತ್ತು ನಾಲ್ವರು ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಎಲ್ಲರೂ ತೀವ್ರತರದ ಗ್ಯಾಸ್ಟ್ರೋಎಂಟರೈಟಿಸ್ ಹೊಂದಿರುವುದಾಗಿ ತಿಳಿದು ಬಂದಿದ್ದು, ಎಲ್ಲರ ಆರೋಗ್ಯ ಸ್ಥಿರವಾಗಿದೆ. ಹೆಚ್ಚಿನ ಪರೀಕ್ಷೆಗೆ ಮಾದರಿಗಳನ್ನು ಪ್ರಯೋಗಾಲಯಕ್ಕೆ ಕಳುಹಿಸಲಾಗಿದ್ದು, ವರದಿಗೆ ಕಾಯುತ್ತಿರುವುದಾಗಿ ಬಿಎಂಸಿಆರ್‌ಐ ಡೀನ್ ಮತ್ತು ನಿರ್ದೇಶಕ ಡಾ. ರಮೇಶ್ ಕೃಷ್ಣ ತಿಳಿಸಿದ್ದಾರೆ.