ಧಾರವಾಡ: ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಚುನಾವಣೆಗೆ ಸಲ್ಲಿಕೆಯಾಗಿದ್ದ 569 ನಾಮಪತ್ರಗಳ ಪರಿಶೀಲನೆ ಕಾರ್ಯ ಮಂಗಳವಾರ ಜರುಗಿತು. 47 ನಾಮಪತ್ರಗಳು ತಿರಸ್ಕೃತಗೊಂಡಿದ್ದು, 486 ಕ್ರಮಬದ್ಧವಾಗಿವೆ. ಆ. 26ರವರೆಗೆ ನಾಮಪತ್ರ ಹಿಂಪಡೆಯಲು ಕಾಲಾವಕಾಶವಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ನಿತೇಶ ಪಾಟೀಲ ತಿಳಿಸಿದ್ದಾರೆ.
82 ವಾರ್ಡ್ಗಳಿಗೆ ಸಂಬಂಧಿಸಿದಂತೆ ಒಟ್ಟು 16 ಜನ ಚುನಾವಣಾಧಿಕಾರಿಗಳನ್ನು ನೇಮಿಸಲಾಗಿತ್ತು. ಎಲ್ಲ ಚುನಾವಣಾಧಿಕಾರಿಗಳು ಸ್ವೀಕೃತವಾಗಿದ್ದ ನಾಮಪತ್ರಗಳನ್ನು ಮಂಗಳವಾರ ಬೆಳಗ್ಗೆ 11 ಗಂಟೆಯಿಂದ ಪರಿಶೀಲನೆ ಕೈಗೊಂಡು ಕ್ರಮಬದ್ಧವಲ್ಲದ ನಾಮಪತ್ರಗಳನ್ನು ತಿರಸ್ಕರಿಸಿದ್ದಾರೆ.
ಬಿಜೆಪಿ ಹಾಗೂ ಕಾಂಗ್ರೆಸ್ನಿಂದ ಸಲ್ಲಿಸಿದ್ದ ಎಲ್ಲ ಅಭ್ಯರ್ಥಿಗಳ ನಾಮಪತ್ರಗಳೂ ಕ್ರಮಬದ್ಧವಾಗಿವೆ. ಆಮ್ ಆದ್ಮಿ ಪಾರ್ಟಿಯಿಂದ 44 ಜನರು ನಾಮಪತ್ರ ಸಲ್ಲಿಸಿದ್ದರು. ಅದರಲ್ಲಿ ಮೂವರ ನಾಮಪತ್ರ ತಿರಸ್ಕಾರಗೊಂಡಿವೆ.