ಜಿಲ್ಲೆ

4ರಂದು ಗೃಹರಕ್ಷಕರ ದಿನಾಚರಣೆ

ಚಾಮರಾಜನಗರ: ಅಖಿಲ ಭಾರತ ಗೃಹರಕ್ಷಕರ ದಿನಾಚರಣೆ ಕಾರ್ಯಕ್ರಮವನ್ನು ಜ.4ರಂದು ಮಧ್ಯಾಹ್ನ 12 ಗಂಟೆಗೆ ನಗರದ ಡಾ. ಬಿ.ಆರ್ ಅಂಬೇಡ್ಕರ್ ಸಮುದಾಯ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ. ಜಿಲ್ಲಾಧಿಕಾರಿ ಶಿಲ್ಪಾನಾಗ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಬಿ.ಟಿ.ಕವಿತಾ, ಹೆಚ್ಚುವರಿ ಜಿಲ್ಲಾಧಿಕಾರಿ ಗೀತಾ ಹುಡೇದ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಕಾರ್ಯಕ್ರಮದಲ್ಲಿ ಭಾಗವಹಿಸುವರು ಎಂದು ಗೃಹರಕ್ಷಕದಳದ ಸಮಾದೇಷ್ಟರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.