ಜಿಲ್ಲೆ

5.02 ಲಕ್ಷ ರೂ. ವರ್ಗಾಯಿಸಿಕೊಂಡು ವಂಚನೆ

ಮರಿದೇವ ಹೂಗಾರ

ಹುಬ್ಬಳ್ಳಿ: ಷೇರು ಮಾರ್ಕೆಟನಲ್ಲಿ ಹೆಚ್ಚು ಹೂಡಿಕೆ ಮಾಡಿದರೆ ಲಾಭಗಳಿಸಬಹುದೆಂದು ನಂಬಿಸಿದ ವಂಚಕರು, ನಗರದ ವ್ಯಕ್ತಿಯೊಬ್ಬರ ಬ್ಯಾಂಕ್ ಖಾತೆಯಿಂದ 5.02 ಲಕ್ಷ ರೂ. ವರ್ಗಾಯಿಸಿಕೊಂಡು ವಂಚಿಸಿದ್ದಾರೆ.

ನಗರದ ರೋಹನ್ ವಂಚನೆಗೆ ಒಳಗಾಗಿದ್ದಾರೆ. ರೋಹನ್‌ಗೆ ಟ್ರೇಡಿಂಗ್ ಬಗ್ಗೆ ತಿಳಿಸಿ ವಾಟ್ಸ್‌ಆ್ಯಪ್ ಗ್ರೂಪ್ ಒಂದಕ್ಕೆ ಸೇರಿಸಿದ ವಂಚಕರು, ನಂತರ ಅವರ ಬ್ಯಾಂಕ್ ಖಾತೆಯಿಂದ ಹಂತ ಹಂತವಾಗಿ 5,02,900 ರೂ. ವರ್ಗಾಯಿಸಿಕೊಂಡು ಮೋಸ ಮಾಡಲಾಗಿದೆ ಎಂದು ಸಿಇಎನ್ ಕ್ರೈಂ ಠಾಣೆಗೆ ನೀಡಿದ ದೂರಿನಲ್ಲಿ ವಿವರಿಸಲಾಗಿದೆ.