ರಬಕವಿ-ಬನಹಟ್ಟಿ ತಾಲೂಕಿನ ಹಿಪ್ಪರಗಿ ಜಲಾಶಯದಲ್ಲಿ ಸೋಮವಾರ ಸಂಗ್ರಹವಾಗಿದ್ದ ನೀರಿನ ಪ್ರಮಾಣ. 
ಜಿಲ್ಲೆ

ಹಿಪ್ಪರಗಿ ಜಲಾಶಯದಲ್ಲಿ 5.8 ಟಿಎಂಸಿ ನೀರು ಸಂಗ್ರಹ

ದತ್ತಾತ್ರೇಯ ಪಿ ಕುಲಕರ್ಣಿ

ರಬಕವಿ-ಬನಹಟ್ಟಿ: ಸಮೀಪದ ಹಿಪ್ಪರಗಿ ಜಲಾಶಯಕ್ಕೆ ಮಹಾರಾಷ್ಟ್ರದಿಂದ ಬರುವ ನೀರಿನ ಪ್ರಮಾಣ ಅತ್ಯಂತ ಕಡಿಮೆಯಾದ ಹಿನ್ನೆಲೆಯಲ್ಲಿ ಸೋಮವಾರ ಒಳಹರಿವು 25 ಸಾವಿರ ಕ್ಯೂಸೆಕ್‌ಗೆ ಇಳಿಕೆಯಾಗಿದೆ.

ಕಳೆದ ವಾರದಿಂದ ಅಣೆಕಟ್ಟೆಯ ಎಲ್ಲ 22 ಗೇಟ್‌ಗಳನ್ನು ಬಂದ್ ಮಾಡಿ ನೀರು ಸಂಗ್ರಹ ಮಾಡಲಾಗುತ್ತಿದೆ. 6 ಟಿಎಂಸಿ ನೀರು ಸಂಗ್ರಹ ಸಾಮರ್ಥ್ಯದ ಜಲಾಶಯದಲ್ಲಿ ಸದ್ಯಕ್ಕೆ 5.8 ಟಿಎಂಸಿ ನೀರು ಸಂಗ್ರಹವಿದೆ. ಮುಂದಿನ ದಿನಗಳಲ್ಲಿ ಇನ್ನಷ್ಟು ನೀರು ಸಂಗ್ರಹಿಸಲಾಗುತ್ತಿದೆ.

ಜಲಾಶಯ ಸಂಪೂರ್ಣ ಭರ್ತಿಯಾದ ಮೇಲೆ ಹೆಚ್ಚಿನ ನೀರು ಕೃಷ್ಣಾ ನದಿಗೆ ಬಿಡಲಾಗುವುದು ಎಂದು ಜಮಖಂಡಿ ತಾಲೂಕಿನ ಹಿಪ್ಪರಗಿ ಡ್ಯಾಂ ಸೈಟ್ ಅಧಿಕಾರಿಗಳು ತಿಳಿಸಿದ್ದಾರೆ.