ಹಾಸನ: ನಗರದ ಅಂಬೇಡ್ಕರ್ ಭವನದಲ್ಲಿ ಜ.5ರ ಭಾನುವಾರ ಬೆಳಿಗ್ಗೆ 11 ಗಂಟೆಗೆ ಓಪನ್ 4ನೇ ರಾಷ್ಟ್ರೀಯ ಕರಾಟೆ ಪಂದ್ಯಾವಳಿಯನ್ನು ಆಯೋಜಿಸಲಾಗಿದೆ ಎಂದು ಹಾಸನ ಜಿಲ್ಲಾ ಕರಾಟೆ ಸಂಸ್ಥೆಯ ಅಧ್ಯಕ್ಷ ಮೊಹಮ್ಮದ್ ಆರೀಫ್ ತಿಳಿಸಿದರು.
ನಮ್ಮ ಸಂಸ್ಥೆಯು ಈಗಾಗಲೇ ಹಲವು ಕರಾಟೆ ಪಂದ್ಯಾವಳಿಗಳನ್ನು ಹಾಸನದಲ್ಲಿ ಯಶಸ್ವಿಯಾಗಿ ಆಯೋಜಿಸಿದ್ದು, ಪ್ರಸ್ತುತ ಜನವರಿ 5 ರಂದು ಅಂಬೇಡ್ಕರ್ ಭವನದಲ್ಲಿ ಹಾಸನ ಓಪನ್ 4 ನೇ ರಾಷ್ಟ್ರೀಯ ಪಂದ್ಯಾವಳಿಯನ್ನು ಆಯೋಜಿಸಿದೆ. ಈ ಪಂದ್ಯಾವಳಿಗೆ ಕರ್ನಾಟಕ, ಶಿವಮೊಗ್ಗ, ಬೆಂಗಳೂರು, ಮೈಸೂರು, ಬಳ್ಳಾರಿ ಹಾಗೂ ಕೇರಳ, ತಮಿಳುನಾಡು ಸೇರಿದಂತೆ ಸುಮರು 450 ಕ್ರೀಡಾಪಟುಗಳು ಆಗಮಿಸುತ್ತಿದ್ದು, ಕ್ರೀಡಾಕೂಟದಲ್ಲಿ 5 ರಿಂದ 18 ವರ್ಷ ಮೇಲ್ಪಟ್ಟ ಎಲ್ಲಾ ವಯೋಮಾನದವರು ಭಾಗವಹಿಸುತ್ತಿದ್ದಾರೆ ಎಂದು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.
ಪಂದ್ಯಾವಳಿಯ ಉದ್ಘಾಟನೆಯನ್ನು ಜನವರಿ 5ರ ಬೆಳ್ಳಿಗ್ಗೆ 11 ಗಂಟೆಗೆ ಶಾಸಕ ಎಚ್.ಪಿ. ಸ್ವರೂಪ್ ಪ್ರಕಾಶ್ ಹಾಗೂ ಸಂಸದ ಶ್ರೇಯಸ್ ಎಂ. ಪಟೇಲ್ ನೆರವೇರಿಸಲಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕರ್ನಾಟಕ ರಾಜ್ಯ ಕರಾಟೆ ಸಂಸ್ಥೆಯ ರಾಜ್ಯಾಧ್ಯಕ್ಷ ರೆನ್‌ಶಿ ಶಿವಮೊಗ್ಗ ವಿನೋದ್ ವಹಿಸಲಿದ್ದಾರೆ ಎಂದು ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಹಾಸನ ಜಿಲ್ಲಾ ಕರಾಟೆ ಸಂಸ್ಥೆಯ ಸುಸೈನ್, ಸರ್ಪಾಸ್, ಶೇಹನ್, ಶಮಂತ್ ಇತರರು ಉಪಸ್ಥಿತರಿದ್ದರು.