ಜಿಲ್ಲೆ

50 ದಿನಗಳ ಆನ್‌ಲೈನ್ ತರಬೇತಿ

Belagavi

ಬೆಳಗಾವಿ: ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ಐಬಿಪಿಎಸ್ ರಾಷ್ಟ್ರೀಕೃತ ಬ್ಯಾಂಕ್ ವತಿಯಿಂದ ಮುಂದಿನ ದಿನಗಳಲ್ಲಿ ಒಂಬತ್ತು ಸಾವಿರ ಅಧಿಕಾರಿ ಮತ್ತು ಗುಮಾಸ್ತರ ಹುದ್ದೆಗೆ ನೇಮಕ ಮಾಡಿಕೊಳ್ಳಲಾಗುತ್ತಿದೆ.

ಅದಕ್ಕಾಗಿ ನಡೆಸುವ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ 50 ದಿನಗಳ ಆನ್‌ಲೈನ್‌ನಲ್ಲಿ ತರಬೇತಿ ನೀಡಲು ಆಯೋಜಿಸಿದೆ. ಆಸಕ್ತರು ರಜಾ ದಿನ ಹೊರತುಪಡಿಸಿ ಆ. 25ರ ಒಳಗಾಗಿ ಬೆಳಗ್ಗೆ 10ರಿಂದ ಸಂಜೆ 4ರ ವರೆಗೆ ಹೆಸರು ನೋಂದಾಯಿಸಿಕೊಳ್ಳಲು ದೂ.ಸಂ. 0821-2515944 ಸಂಪರ್ಕಿಸಬಹುದು ಎಂದು ಕ.ರಾ.ಮು.ವಿ ಕುಲಸಚಿವ ಪ್ರೊ. ಲಿಂಗರಾಜಗಾಂಧಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.