ಜಿಲ್ಲೆ

ಉಪ್ಪಾರ ಮಠಕ್ಕೆ 500 ಎಕರೆ ಜಾಗ?

Davangere - Desk - Mahesh Babu E

ಹೊಸದುರ್ಗ: ಭಗೀರಥ ಮಠವಿರುವ 500 ಎಕರೆ ಜಾಗವನ್ನು ಶ್ರೀಮಠಕ್ಕೆ ಮಂಜೂರು ಮಾಡುವ ಕೆಲಸವನ್ನು ಸರ್ಕಾರದಿಂದ ಮಾಡಿಸಲಾಗುವುದು ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಭರವಸೆ ನೀಡಿದರು.

ತಾಲೂಕಿನ ಬ್ರಹ್ಮವಿದ್ಯಾನಗರದ ಭಗೀರಥ ಗುರುಪೀಠದಲ್ಲಿ ಭಾನುವಾರ ಆಯೋಜಿಸಿದ್ದ ರಾಜ್ಯಮಟ್ಟದ ಭಗೀರಥ ಪ್ರತಿಭಾ ಪುರಸ್ಕಾರ ಹಾಗೂ ಸಾಧಕರಿಗೆ ಸನ್ಮಾನ ಸಮಾರಂಭದಲ್ಲಿ ಮಾತನಾಡಿದರು.

ಭಗೀರಥ ಶ್ರೀಗಳು ಮಾಡುತ್ತಿರುವ ಸಮಾಜಮುಖಿ ಕಾರ್ಯಗಳಿಗೆ ಎಲ್ಲರೂ ಬೆಂಬಲ ನೀಡಿದರೆ ಸರ್ಕಾರದಿಂದ ಹೆಚ್ಚಿನ ಸೌಲಭ್ಯ ಪಡೆಯಲು ಸಾಧ್ಯ ಎಂದರು.