ಜಾಲಿಹಾಳ ಗ್ರಾಮದಲ್ಲಿ ಬಾಲಕಿಯರ ಅಂಬೇಡ್ಕರ್ ವಸತಿ ಕಟ್ಟಡ ನಿರ್ಮಾಣಕ್ಕೆ ಶಾಸಕ ಹಂಪನಗೌಡ ಬಾದರ್ಲಿ ಭೂಮಿಪೂಜೆ ನೆರವೇರಿಸಿದರು. ಸ್ತ್ರೀಶಕ್ತಿ ಒಕ್ಕೂಟದ ಅಧ್ಯಕ್ಷ ಶ್ರೀದೇವಿ ಶ್ರೀನಿವಾಸ, ಗ್ರಾಮೀಣ ಕಾಂಗ್ರೆಸ್ ಲಿಂಗಪ್ಪ ದಢೇಸುಗೂರು, ನಗರ ಅಧ್ಯಕ್ಷ ಖಾಜಿ ಮಲ್ಲಿಕ್ ವಕೀಲ, ಗ್ರಾಪಂ ಅಧ್ಯಕ್ಷೆ ಮಹಾದೇವಮ್ಮ, ಉಪಾಧ್ಯಕ್ಷೆ ಶಾರದಮ್ಮ, 
ಜಿಲ್ಲೆ

ಕಕ ಅಭಿವೃದ್ಧಿ ಮಂಡಳಿಗೆ 5 ಸಾವಿರ ಕೋಟಿ ರೂ. ಅನುದಾನ

ಸಿಂಧನೂರು: ಗ್ರಾಮೀಣ ಭಾಗಕ್ಕೆ ಮೂಲ ಸೌಕರ್ಯ ಒದಗಿಸಲು ಆದ್ಯತೆ ನೀಡಿದ್ದು ಈಗಾಗಲೇ ಬಹುತೇಕ ಗ್ರಾಮಗಳಿಗೆ ರಸ್ತೆ ಸೇರಿ ಇತರ ಸೌಲಭ್ಯ ಒದಗಿಸಲಾಗಿದೆ ಎಂದು ಶಾಸಕ ಹಂಪನಗೌಡ ಬಾದರ್ಲಿ ಹೇಳಿದರು.

ತಾಲೂಕಿನ ಜಾಲಿಹಾಳ ಗ್ರಾಮದಲ್ಲಿ ಬುಧವಾರ ಬಾಲಕಿಯರ ಅಂಬೇಡ್ಕರ್ ವಸತಿ ಕಟ್ಟಡ ನಿರ್ಮಾಣಕ್ಕೆ ಭೂಮಿಪೂಜೆ ನೆರವೇರಿಸಿ ಮಾತನಾಡಿದರು.

ಕಲ್ಯಾಣ ಕರ್ನಾಟಕ ಭಾಗ ಶಿಕ್ಷಣದಲ್ಲಿ ಹಿಂದುಳಿದಿರುವುದನ್ನು ಅಳಿಸಲು ಸರ್ಕಾರ ಕಕ ಅಭಿವೃದ್ಧಿ ಮಂಡಳಿಗೆ 5 ಸಾವಿರ ಕೋಟಿ ರೂ. ಅನುದಾನ ಮೀಸಲಿರಿಸಿದೆ. ಇದರಲ್ಲಿ ಶೇ25 ಅನುದಾನವನ್ನು ಶಿಕ್ಷಣ, ಆರೋಗ್ಯ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿಗೆ ನೀಡಲಾಗಿದೆ. ಮುಂಬರುವ ದಿನಗಳಲ್ಲಿ ಶಿಕ್ಷಣ ಕ್ಷೇತ್ರವನ್ನು ಇನ್ನಷ್ಟು ಬಲಗೊಳಿಸಲು ಸರ್ಕಾರ ಬದ್ಧವಾಗಿದೆ ಎಂದರು.

ಪ್ರಮುಖರಾದ ಲಿಂಗಪ್ಪ ಗುಡೂರು, ಮರಿಯಪ್ಪ, ತಿಮ್ಮಣ್ಣ ಸಾಹುಕಾರ, ಗುತ್ತಿಗೆದಾರರಾದ ಬಸವರಾಜ ಹುಗಿಬಂಡಿ, ಬಸವರಾಜಗೌಡ ಗಣೇಕಲ್, ದೇವೇಂದ್ರಗೌಡ ಇತರರು ಇದ್ದರು.

ಭೂಮಿಪೂಜೆ: ಕೆ.ಬಸಾಪುರದಿಂದ ಮೈಲಾಪುರ 2 ಕಿಮೀವರೆಗಿನ 2.24 ಕೋಟಿ ರೂ. ವೆಚ್ಚದ ರಸ್ತೆ ಕಾಮಗಾರಿಗೆ ಶಾಸಕ ಹಂಪನಗೌಡ ಬಾದರ್ಲಿ ಭೂಮಿಪೂಜೆ ನೆರವೇರಿಸಿದರು.