ಮದ್ದೂರು: ಫಲಾನುಭವಿಗಳಿಗೆ ಮನೆಗಳ ಹಕ್ಕುಪತ್ರ ಕೊಡಿಸಲು ಸರ್ಕಾರ ಮತ್ತು ಅಧಿಕಾರಿಗಳ ಮಟ್ಟದಲ್ಲಿ ನಿರಂತವಾಗಿ ಪ್ರಯತ್ನ ಮಾಡಿದ ಫಲವಾಗಿ ಹಕ್ಕುಪತ್ರ ದೊರಕಿದೆ ಎಂದು ಶಾಸಕ ಡಿ.ಸಿ.ತಮ್ಮಣ್ಣ ತಿಳಿಸಿದರು.
ಪಟ್ಟಣದ ಅಂಬೇಡ್ಕರ್ ಭವನದಲ್ಲಿ ಸೋಮವಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಕಂದಾಯ ಮತ್ತು ಪಂಚಾಯತ್ ರಾಜ್ ಇಲಾಖೆಯಿಂದ ತಾಲೂಕಿನ ವಿವಿಧ ಗ್ರಾಮಗಳ 541 ಫಲಾನುಭವಿಗಳಿಗೆ ಹಕ್ಕುಪತ್ರ ವಿತರಣೆ ಮಾಡಿ ಮಾತನಾಡಿದರು. ನಿರಂತರವಾಗಿ ಶ್ರಮ ಹಾಕದೆ ಹೋಗಿದ್ದರೆ ಹಕ್ಕುಪತ್ರಗಳು ಸಿಗುವುದು ಇನ್ನೂ ವಿಳಂವಾಗುತ್ತಿತ್ತು ಎಂದರು.
ತಹಸೀಲ್ದಾರ್ ಟಿ.ಎನ್.ನರಸಿಂಹಮೂರ್ತಿ, ಶಿರಸ್ತೇದಾರ್ ಚಂದ್ರಶೇಖರ್, ರಾಜಸ್ವ ನಿರೀಕ್ಷಕ ಜಗದೀಶ್, ಮೋಹನ್, ರವೀಂದ್ರ ಹಾಗೂ ಕಂದಾಯ ಇಲಾಖೆ ಅಧಿಕಾರಿಗಳು, ಸಿಬ್ಬಂದಿ ಇದ್ದರು.