ಮುದನೂರ (ಬಿ) ಗ್ರಾಮದಲ್ಲಿ ಶುಕ್ರವಾರ ವಾಂತಿಭೇದಿಯಿAದ 50ಕ್ಕೂ ಹೆಚ್ಚು ಜನರು ಅಸ್ವಸ್ಥಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ರೋಗಿಗಳನ್ನು ಶನಿವಾರ ಜಿಪಂ ಉಪ ಕಾರ್ಯದರ್ಶಿ ವಿಜಯಕುಮಾರ ಮಡ್ಡೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದರು. ಡಾ.ಎಸ್.ಎಚ್.ಪಾಟೀಲ್, ಡಾ.ಆರ್.ವಿ.ನಾಯಕ, ಡಾ.ಗಿರೀಶ ಕುಲಕರ್ಣಿ ಇತರರಿದ್ದರು. 
ಜಿಲ್ಲೆ

57ಕ್ಕೇರಿದ ವಾಂತಿಭೇದಿ ಪ್ರಕರಣ

ಕೆಂಭಾವಿ: ಮುದನೂರ (ಬಿ) ಗ್ರಾಮದಲ್ಲಿ ಶುಕ್ರವಾರ ನಡೆದ ವಾಂತಿಭೇದಿ ಪ್ರಕರಣಕ್ಕೆ ಸಂಬAಧಿಸಿದAತೆ ಶನಿವಾರ ಮತ್ತೆ ಉಲ್ಬಣಗೊಂಡಿದ್ದು ಸಂಜೆವರೆಗೆ 57 ಜನರಲ್ಲಿ ವಾಂತಿಭೇದಿ ಕಾಣಿಸಿಕೊಂಡಿದೆ.

ಆರು ಮಕ್ಕಳೂ ಸೇರಿ 50ಕ್ಕೂ ಹೆಚ್ಚು ಜನರು ಅಸ್ವಸ್ಥಗೊಂಡಿದ್ದು, ಅವರೆಲ್ಲರನ್ನು ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ನೀಡುತ್ತಿದ್ದು ಆರು ಮಕ್ಕಳಿಗೆ ಮಾತ್ರ ಶಹಾಪುರ ನಗರದ ಖ್ಯಾತ ಮಕ್ಕಳ ವೈದ್ಯರ ಬಳಿ ಚಿಕಿತ್ಸೆ ನೀಡಲಾಗುತ್ತಿದೆ.

ಗ್ರಾಮದ ಜನತಾ ಕಾಲನಿಯಲ್ಲಿ ಈ ಘಟನೆ ನಡೆದಿದ್ದು, ನೀರಿನ ವರದಿ ಬಂದರಷ್ಟೇ ಈ ಘಟನೆಯ ಸತ್ಯಾಂಸ ಹೊರಬರಲಿದೆ. ಜಿಪಂ ಉಪ ಕಾರ್ಯದರ್ಶಿ ವಿಜಯಕುಮಾರ ಮಡ್ಡೆ ಶನಿವಾರ ಆಸ್ಪತ್ರೆಗೆ ಭೇಟಿ ನೀಡಿ, ರೋಗಿಗಳ ಆರೋಗ್ಯ ವಿಚಾರಿಸಿ, ಸೂಕ್ತ ಚಿಕಿತ್ಸೆ ನೀಡುವಂತೆ ವೈದ್ಯರಿಗೆ ತಾಕೀತು ಮಾಡಿದರು.
ಶನಿವಾರ ಸಮುದಾಯ ಆರೋಗ್ಯ ಕೇಂದ್ರಕ್ಕೆ ಮಾಜಿ ಸಚಿವ ನರಸಿಂಹ ನಾಯಕ (ರಾಜುಗೌಡ) ಅವರ ಸಹೋದರ ಬಿಜೆಪಿ ಯುವ ನಾಯಕ ಹಣಮಂತ ನಾಯಕ (ಬಬ್ಲೂಗೌಡ) ಭೇಟಿ ನೀಡಿ ರೋಗಿಗಳ ಆರೋಗ್ಯ ವಿಚಾರಿಸಿದರು. ಘಟನೆ ಕುರಿತು ವೈದ್ಯರಿಂದ ಮಾಹಿತಿ ಪಡೆದು, ಎರಡು ದಿನದಿಂದ ವೈದ್ಯರು ಶ್ರಮಿಸುತ್ತಿರುವನ್ನು ಗಮನಿಸಿ ಮೆಚ್ಚುಗೆ ವ್ಯಕ್ತಪಡಿಸಿದರು.

ನಂತರ ಮುದನೂರ ಗ್ರಾಮಕ್ಕೆ ಭೇಟಿ ನೀಡಿ ಕುಡಿಯುವ ನೀರಿನ ಸ್ಥಳವನ್ನು ವೀಕ್ಷಣೆ ಮಾಡಿದರು. ವೀರೇಶ ಚಿಂಚೋಳಿ, ಸಂಗಾರೆಡ್ಡಿ ಚೌಧರಿ, ವಿಜಯರೆಡ್ಡಿ ಚೌಧರಿ, ಕೃಷ್ಣಾರೆಡ್ಡಿ ಮುದನೂರ, ವೀರೇಶರೆಡ್ಡಿ ಇದ್ದರು.

ಕೆಂಭಾವಿ ಆರೋಗ್ಯ ಕೇಂದ್ರಕ್ಕೆ ವೈದ್ಯರ ದಂಡು: ಶನಿವಾರ ಬೆಳಗ್ಗೆಯಿಂದ ಪ್ರಕರಣಗಳು ಹೆಚ್ಚುತ್ತಿರುವುದನ್ನು ಸೂಕ್ಷö್ಮವಾಗಿ ಗಮನಿಸಿದ ಆರೋಗ್ಯ ಇಲಾಖೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಪ್ರಭುಲಿಂಗ ಮಾನಕರ, ಜಿಲ್ಲಾ ಕಾಲರಾ ಸರ್ವೇಕ್ಷಣಾಧಿಕಾರಿ ಡಾ.ಎಸ್.ಎಚ್. ಪಾಟೀಲ್, ಟಿಎಚ್‌ಒ ಡಾ.ಆರ್.ವಿ.ನಾಯಕ, ಆಡಳಿತ ವೈದ್ಯಾಧಿಕಾರಿ ಡಾ.ಗಿರೀಶ ಕುಲಕರ್ಣಿ, ಡಾ.ಪ್ರಿಯಾಂಕಾ ಪಾಟೀಲ್, ಡಾ.ಸಿದ್ದು ನ್ಯಾಮಗೊಂಡ ಸೇರಿ ವಲಯದ ಹಲವು ಪ್ರಾಥಮಿಕ ಆರೋಗ್ಯ ಕೇಂದ್ರದ ಸಿಬ್ಬಂದಿ, ಹುಣಸಗಿ ಹಾಗೂ ಸುರಪುರ ತಾಲೂಕು ಕೇಂದ್ರದ ಆರೋಗ್ಯ ಕೇಂದ್ರದ ಸಿಬ್ಬಂದಿ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಬೀಡು ಬಿಟ್ಟು ರೋಗಿಗಳಿಗೆ ಚಿಕಿತ್ಸೆ ನೀಡುತ್ತಿದ್ದಾರೆ.

ಗ್ರಾಮದಲ್ಲಿ ಬೀಡು ಬಿಟ್ಟ ತಜ್ಞರು: ವಾಂತಿಭೇದಿ ಪ್ರಕರಣ ಬೆಳಕಿಗೆ ಬರುತ್ತಲೆ ಮುದನೂರ (ಬಿ) ಗ್ರಾಮದಲ್ಲಿ ಆರೋಗ್ಯ ಇಲಾಖೆ, ನೀರು ಸರಬರಾಜು ಮತ್ತು ನೈರ್ಮಲ್ಯ ಮತ್ತು ಪಂಚಾಯತ್ ರಾಜ್ ಇಲಾಖೆ ಅಧಿಕಾರಿಗಳು ಹಾಗೂ ಸಿಬ್ಬಂದಿ ಗ್ರಾಮದಲ್ಲಿ ಬೀಡು ಬಿಟ್ಟಿದ್ದು ಜನತೆಯ ಆರೋಗ್ಯ ವೀಕ್ಷಣೆ ಮಾಡುತ್ತಿದ್ದಾರೆ. ಈ ವೇಳೆ ಗ್ರಾಮದಲ್ಲಿ ತಾತ್ಕಾಲಿಕ ಚಿಕಿತ್ಸಾ ಕೇಂದ್ರ ಸ್ಥಾಪಿಸಿರುವ ಆರೋಗ್ಯ ಇಲಾಖೆ ಪ್ರಕರಣ ಕಂಡು ಬಂದರೆ ತಕ್ಷಣಕ್ಕೆ ಸ್ಥಳದಲ್ಲೆ ಪ್ರಾಥಮಿಕ ಚಿಕಿತ್ಸೆ ನೀಡಲು ಎಲ್ಲ ಸಿದ್ಧತೆ ಮಾಡಿಕೊಂಡಿದೆ ಎಂದು ತಾಲೂಕು ವೈದ್ಯಾಧಿಕಾರಿ ಡಾ.ಆರ್.ವಿ.ನಾಯಕ ತಿಳಿಸಿದರು.