ದೊಡ್ಡಬಳ್ಳಾಪುರ ತಾಲೂಕು ಘಾಟಿ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಹುಂಡಿ ಹಣ ಎಣಿಕೆ ಮಾಡಲಾಯಿತು. ತಹಸೀಲ್ದಾರ್ ಜೆ.ಜೆ.ಹೇಮಾವತಿ, ಪ್ರಧಾನ ಅರ್ಚಕ ಆರ್.ಸುಬ್ರಹ್ಮಣ್ಯ, ದೇವಾಲಯದ ನಂಜಪ್ಪ ಇತರರು ಇದ್ದರು. 
ಜಿಲ್ಲೆ

ಘಾಟಿ ಹುಂಡಿಯಲ್ಲಿ 59 ಲಕ್ಷ ರೂಪಾಯಿ ಸಂಗ್ರಹ

ದೊಡ್ಡಬಳ್ಳಾಪುರ ತಾಲೂಕು ಘಾಟಿ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಹುಂಡಿ ಹಣ ಎಣಿಕೆ ಮಾಡಲಾಯಿತು. ತಹಸೀಲ್ದಾರ್ ಜೆ.ಜೆ.ಹೇಮಾವತಿ, ಪ್ರಧಾನ ಅರ್ಚಕ ಆರ್.ಸುಬ್ರಹ್ಮಣ್ಯ, ದೇವಾಲಯದ ನಂಜಪ್ಪ ಇತರರು ಇದ್ದರು.

ತೂಬಗೆರೆ: ಹೋಬಳಿಯ ಘಾಟಿ ಸುಬ್ರಹ್ಮಣ್ಯಸ್ವಾಮಿ ಕ್ಷೇತ್ರದಲ್ಲಿ ಸೋಮವಾರ ಹುಂಡಿ ಹಣ ಎಣಿಕೆ ಮಾಡಲಾಗಿದ್ದು, 59,34,739 ರೂಪಾಯಿ ನಗದು, ಹಾಗೂ 1 ಗ್ರಾಂ ಚಿನ್ನ, 1,800 ಗ್ರಾಂ ಬೆಳ್ಳಿ ಕಾಣಿಕೆ ರೂಪದಲ್ಲಿ ಸಂಗ್ರಹವಾಗಿದೆ.
ಹುಂಡಿ ಹಣ ಎಣಿಕೆ ಕಾರ್ಯದಲ್ಲಿ ದೇವಾಲಯದ ಕಾರ್ಯನಿರ್ವಾಹಕ ಅಧಿಕಾರಿ ಎಂ.ನಾರಾಯಣಸ್ವಾಮಿ, ಮುಜರಾಯಿ ಇಲಾಖೆ ತಹಸೀಲ್ದಾರ್ ಜೆ.ಜೆ.ಹೇಮಾವತಿ, ಪ್ರಧಾನ ಅರ್ಚಕ ಆರ್.ಸುಬ್ರಹ್ಮಣ್ಯ, ದೇವಾಲಯದ ನಂಜಪ್ಪ, ಕೆನರಾ ಬ್ಯಾಂಕ್ ಸಿಬ್ಬಂದಿ, ಪೊಲೀಸ್ ಸಿಬ್ಬಂದಿ, ಹಾಗೂ ದೇವಾಲಯದ ಸಿಬ್ಬಂದಿ ಇದ್ದರು.