ಜಿಲ್ಲೆ

ಮಣಿಪಾಲ್ ಇನ್ಸ್​ಟಿಟ್ಯೂಟ್​ನಲ್ಲಿ 59 ವಿದ್ಯಾರ್ಥಿಗಳಿಗೆ ಕರೊನಾ... ಕಂಟೇನ್​ಮೆಂಟ್ ಜೋನ್ ಘೋಷಣೆ

ಮಣಿಪಾಲ: ಕರ್ನಾಟಕದ ಮಣಿಪಾಲ್ ಇನ್ಸ್​​ಟಿಟ್ಯೂಟ್ ಆಫ್ ಟೆಕ್ನಾಲಜಿ(ಎಂಐಟಿ)ಯ 59 ವಿದ್ಯಾರ್ಥಿಗಳಿಗೆ ಕರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಈ ಸನ್ನಿವೇಶದ ಹಿನ್ನೆಲೆಯಲ್ಲಿ ಎಂಐಟಿ ಕ್ಯಾಂಪಸ್​​ಅನ್ನು ಕಂಟೇನ್​ಮೆಂಟ್ ಜೋನ್ ಆಗಿ ಘೋಷಿಸಲಾಗಿದೆ ಎಂದು ಜಿಲ್ಲಾ ವೈದ್ಯಾಧಿಕಾರಿಗಳು ತಿಳಿಸಿದ್ದಾರೆ.

ಈ ನಿಟ್ಟಿನಲ್ಲಿ ಕರೊನಾ ಪ್ರೊಟೋಕಾಲ್​ಅನ್ನು ಕಟ್ಟುನಿಟ್ಟಾಗಿ ಪಾಲಿಸಲಾಗುತ್ತಿದ್ದು, ಸೋಂಕಿತ ವಿದ್ಯಾರ್ಥಿಗಳನ್ನು ಪ್ರತ್ಯೇಕವಾಗಿರಿಸುವ, ಮತ್ತು ಪ್ರಾಥಮಿಕ ಸಂಪರ್ಕಕ್ಕೆ ಬಂದವರನ್ನು ಟ್ರೇಸ್ ಮಾಡಿ ಪರೀಕ್ಷಿಸುವ ಕ್ರಮ ತೆಗೆದುಕೊಳ್ಳಲಾಗುತ್ತಿದೆ ಎಂದು ರಾಜ್ಯ ಆರೋಗ್ಯ ಸಚಿವ ಡಾ. ಕೆ.ಸುಧಾಕರ್ ಹೇಳಿದ್ದಾರೆ.

ಮಾರ್ಚ್ 17 ರಂದು ಕರ್ನಾಟಕದಲ್ಲಿ 1,275 ಹೊಸ ಕರೊನಾ ಪ್ರಕರಣಗಳು ವರದಿಯಾಗಿದ್ದು, 4 ಕರೊನಾ ಸಂಬಂಧೀ ಸಾವುಗಳು ಸಂಭವಿಸಿವೆ. ಬೆಂಗಳೂರು ನಗರ ಪ್ರದೇಶದಲ್ಲೇ 786 ಪ್ರಕರಣಗಳು ವರದಿಯಾಗಿದ್ದು, ಸೋಂಕಿನ ಪ್ರಮಾಣ ಹೆಚ್ಚದಂತೆ ಕಟ್ಟುನಿಟ್ಟಾಗಿ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಲು ರಾಜ್ಯ ಸರ್ಕಾರ ಸೂಚಿಸಿದೆ. (ಏಜೆನ್ಸೀಸ್) ಕ್ಷಣಕ್ಷಣದ ಮಾಹಿತಿಗಾಗಿ ವಿಜಯವಾಣಿ ಫೇಸ್​ಬುಕ್​ ಪೇಜ್​ ಲೈಕ್​ ಮಾಡಿ