ಹುಬ್ಬಳ್ಳಿ: ಮನೆಯ ಬಾಗಿಲ ಮುರಿದ ಕಳ್ಳರು ಮನೆಯಲ್ಲಿದ್ದ 6.30 ಲಕ್ಷ ರೂ. ಮೌಲ್ಯದ ಬೆಳ್ಳಿ -ಬಂಗಾರದ ಆಭರಣಗಳನ್ನು ಕಳವು ಮಾಡಿಕೊಂಡು ಪರಾರಿಯಾಗಿರುವ ಘಟನೆ ಇಲ್ಲಿಯ ಹೊಸೂರಿನ 2 ನೇ ಕ್ರಾಸ್‌ನಲ್ಲಿರುವ ತೇಜ್ ಅಪಾರ್ಟ್‌ಮೆಂಟ್‌ನಲ್ಲಿ ಇತ್ತೀಚೆಗೆ ನಡೆದಿದೆ.
ಮೃತ್ಯುಂಜಯ ಗಾಣಿಗೇರ ಎಂಬುವರ ಮನೆಯಲ್ಲಿ ಕಳ್ಳತನವಾಗಿದೆ. ಮನೆಯಲ್ಲಿ ಯಾರೂ ಇಲ್ಲದ ವೇಳೆ ಕಳ್ಳರು ಮನೆಯ ಬಾಗಿಲು ಮುರಿದು ಒಳಪ್ರವೇಶಿಸಿದ್ದಾರೆ. ಬಳಿಕ ಮನೆಯಲ್ಲಿದ್ದ ಲಾಕರ್ ತೆರೆದು 115 ಗ್ರಾಂ ಬಂಗಾರದ ಆಭರಣ, 700 ಗ್ರಾಂ ಬೆಳ್ಳಿ ಆಭರಣ ಕಳವು ಮಾಡಿಕೊಂಡು ಹೋಗಿದ್ದಾರೆ. ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.