ಮಹಾರಾಷ್ಟ್ರಕ್ಕೆ ಸಾಗಿಸುತ್ತಿದ್ದ ಆರು ಜಿಂಕೆ ಕೊಂಬುಗಳನ್ನು ಬೆಳಗಾವಿ ಅರಣ್ಯ ಸಂಚಾರಿ ದಳ ವಶಪಡಿಸಿಕೊಂಡಿದೆ. ಪಿಎಸ್‌ಐ ರೋಹಿಣಿ ಪಾಟೀಲ ಇತರರಿದ್ದರು. 
ಜಿಲ್ಲೆ

6 ಜಿಂಕೆ ಕೊಂಬು ವಶ

ಬೆಳಗಾವಿ: ಮಹಾರಾಷ್ಟ್ರಕ್ಕೆ ಜಿಂಕೆಯ ಆರು ಕೊಂಬುಗಳನ್ನು ಸಾಗಿಸುತ್ತಿದ್ದ ವ್ಯಕ್ತಿಯ ಮೇಲೆ ಗುರುವಾರ ದಾಳಿ ನಡೆಸಿರುವ ಅರಣ್ಯ ಸಂಚಾರಿ ದಳದ ಸಿಬ್ಬಂದಿ, ಎಲ್ಲ ಕೊಂಬು ಗಳನ್ನು ವಶಪಡಿಸಿಕೊಂಡಿದ್ದು, ಕಾರ್ಯಾಚರಣೆ ವೇಳೆ ವ್ಯಕ್ತಿ ಪರಾರಿಯಾಗಿದ್ದಾನೆ.

ಧಾರವಾಡ ಜಿಲ್ಲೆಯ ಅಳ್ನಾವರ ತಾಲೂಕಿನ ಸಿದ್ದಾಪುರ ಗ್ರಾಮದ ಮೌಲಾಲಿ ಬುಡ್ಡೆಸಾಬ ಹಂಗರಕಿ ಪರಾರಿಯಾಗಿರುವ ವ್ಯಕ್ತಿ. ಬೆಳಗಾವಿಯ ಗಾಂಧಿನಗರದ ಸೇತುವೆ ಬಳಿ ಚೀಲದಲ್ಲಿ ಜಿಂಕೆ ಕೊಂಬುಗಳನ್ನು ತಂದು ಮಹಾರಾಷ್ಟ್ರಕ್ಕೆ ಸಾಗಿಸುತ್ತಿರುವ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪಿಎಸ್‌ಐ ರೋಹಿಣಿ ಪಾಟೀಲ ನೇತೃತ್ವದ ತಂಡ, 2 ಬಿಳಿ ಹಾಗೂ 4 ಕಂದು ಬಣ್ಣದ ಕೊಂಬುಗಳನ್ನು ವಶಪಡಿಸಿಕೊಂಡಿದೆ. ಪರಾರಿಯಾದ ವ್ಯಕ್ತಿ ವಿರುದ್ಧ ವನ್ಯ ಜೀವಿ ಸಂರಕ್ಷಣಾ ಕಾಯ್ದೆ 1972ರ ಕಲಂ 9, 39, 40, 44, 49 (ಎ.ಬಿ.ಸಿ) 50, 51ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.